ನವದೆಹಲಿ: ರಾಷ್ಟ್ರರಾಜಧಾನಿಯಿಂದ ಮುಂಬೈಗೆ ತೆರಳುತ್ತಿದ್ದ ಆಕಾಶ್​ ಏರ್​ ಫ್ಲೈಟ್​ಗೆ ಬಾಂಬ್​ ಬೆದರಿಕೆ ಬಂದಿದೆ. ತಕ್ಷಣವೆ ಭದ್ರತಾ ಎಚ್ಚರಿಕೆ ಕಾರಣದಿಂದ ಅಹಮದಾಬಾದ್​ಗೆ ಮಾರ್ಗ ಬದಲಾಯಿಸಲಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ ನಂತರ ಎಲ್ಲಾ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಗೆ ಕರೆದೊಯ್ದು, ಸ್ಥಳಕ್ಕೆ ಶ್ವಾನ ದಳದ ತಂಡವನ್ನು ಕರೆಸಿ ಪ್ರಯಾಣಿಕರ ಲಗೇಜ್ ಪರಿಶೀಲಿನೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ :ವಿಸ್ತಾರಾ ಏರ್‌ಲೈನ್ಸ್‌ಗೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ
ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ಫ್ಲೈಟ್ QP 1719ರಲ್ಲಿ ಒಂದು ಶಿಶು ಸೇರಿದಂತೆ 186 ಮತ್ತು 6 ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ವಿಮಾನದಲ್ಲಿ ಭದ್ರತಾ ಎಚ್ಚರಿಕೆ ದೊರೆತ ನಂತರ ಅದನ್ನು ಅಹಮದಾಬಾದ್ ಕಡೆಗೆ ಮಾರ್ಗ ಬದಲಾಯಿಸಲಾಯಿತು. ವಿಮಾನದ ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳನ್ನು ಅನುಸರಿಸಿದ್ದರು. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10:13ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಆಕಾಶ ಏರ್‌ನ ವಕ್ತಾರರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಬೆದರಿಕೆಗಳಿಂದಾಗಿ ವಿವಿಧ ವಿಮಾನಯಾನ ಸಂಸ್ಥೆಗಳ ಹಲವಾರು ವಿಮಾನಗಳ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್​ ಬೆದರಿಕೆ ಪತ್ರ ಸಿಕ್ಕಿದ ಬಳಿಕ 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳೊಂದಿಗೆ ಮುಂಬೈಗೆ ಹೊರಟಿದ್ದ ವಿಸ್ತಾರಾ ವಿಮಾನವನ್ನು ಲ್ಯಾಂಡಿಂಗ್ ಮಾಡಿಲಾಯಿತು.
ವಾರಣಾಸಿ-ದೆಹಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ಮಾಡಿದ ತಕ್ಷಣ ಅಧಿಕಾರಿಗಳು ತಕ್ಷಣ ಕ್ರಮಕೈಗೊಂಡಿದ್ದರು. ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆ ಬಂದಿದ್ದು , ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.(ಏಜೆನ್ಸೀಸ್​)
ತಿಹಾರ್​ ಜೈಲಿಗೆ ಶರಣಾಗುವ ಮುನ್ನ ರಾಜ್​ಘಾಟ್​​, ಹನುಮಾನ್​ ದೇವಸ್ಥಾನಕ್ಕೆ ಸಿಎಂ ಕೇಜ್ರಿವಾಲ್​ ಭೇಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
