ನವದೆಹಲಿ:ಮಂಜಿನ ಜತೆಗೆ ಹೆಚ್ಚುತ್ತಿರುವ ವಾಯುಮಾಲಿನ್ಯದ ಕಾರಣ ದೆಹಲಿ ಎನ್​ಸಿಆರ್​ನಲ್ಲಿ ಗ್ರೇಡೆಡ್​ ರೆಸ್ಪಾನ್ಸ್​ ಆ್ಯನ್​ ಪ್ಲ್ಯಾನ್​ ಸ್ಟೇಜ್​ (ಜಿಆರ್​ಎಪಿ)-3 ಜಾರಿಗೆ ತರಲಾಗಿದೆ. ಇದರನ್ವಯ ಬಿಎಸ್​-3 ಪೆಟ್ರೋಲ್​ ಮತ್ತು ಬಿಎಸ್​-4 ಡೀಸೆಲ್​ ನಾಲ್ಕು ಚಕ್ರಗಳ ವಾಹನಗಳನ್ನು ನಿಷೇಧಿಸಲಾಗಿದೆ.
ಅಲ್ಲದೆ ಅನಿವಾರ್ಯವಲ್ಲದ ನಿರ್ಮಾಣ ಕೆಲಸ, ಕಲ್ಲು ಒಡೆಯುವಿಕೆ ಮತ್ತು ಗಣಿಗಾರಿಕೆಯ ಮೇಲೆ ಕೂಡ ನಿಷೇಧ ಹೇರಿದೆ. ಇವುಗಳನ್ನು ಒಳಗೊಂಡಂತೆ ಒಟ್ಟು 8 ಅಂಶಗಳ ಯೋಜನೆ ಜಾರಿಗೊಳಿಸಲಾಗುವುದು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ನಿರ್ಬಂಧಗಳನ್ನು ಪ್ರಕಟಿಸಿದೆ.
ಶನಿವಾರ ಸಂಜೆಯಿಂದ ದೆಹಲಿ ಎನ್​ಸಿಆರ್​ನ ಗಾಳಿಯ ಗುಣಮಟ್ಟ ಹದಗೆಟ್ಟ ಹಿನ್ನೆಲೆ ಸಿಎಕ್ಯೂಎಂ ಉಪಸಮಿತಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ. ರಾಷ್ಟ್ರೀಯ ಭದ್ರತೆ ಅಥವಾ ರಣೆ, ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಗಳು, ಆರೋಗ್ಯ ರಣೆ, ರೈಲ್ವೆ, ಮೆಟ್ರೋ ರೈಲು, ವಿಮಾನ ನಿಲ್ದಾಣಗಳು, ಅಂತಾರಾಜ್ಯ ಬಸ್​ ರ್ಟಮಿನಲ್​ಗಳು, ಹೆದ್ದಾರಿಗಳು, ರಸ್ತೆಗಳು, ಮೇಲ್ಸೇತುವೆಗಳು, ವಿದ್ಯುತ್​ ಪ್ರಸರಣ, ಪೈಪ್​ಲೈನ್​ಗಳು, ನೈರ್ಮಲ್ಯ ಮತ್ತು ನೀರು ಪೂರೈಕೆಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳಿಗೆ ವಿನಾಯಿತಿ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 1 =
Remember me
