ನವದೆಹಲಿ:ಚೀನಾದ ದಾಳಿಗೆ ಭಾರತದ 20 ಯೋಧರು ಹುತಾತ್ಮರಾದ ಬೆನ್ನಲ್ಲೇ ನವದೆಹಲಿಯಲ್ಲಿರುವ ರಾಯಭಾರಿ ಕಚೇರಿ ಎದುರು ಹಲವರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ರಾತ್ರಿ ಚೀನಾ-ಭಾರತೀಯ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಒಂದೇ ಒಂದು ಗುಂಡು ಹಾರಿಸದೆ, ಕಲ್ಲು ತೂರಾಟ, ದೊಣ್ಣೆಯ ಮೂಲಕವೇ ಹೊಡೆದಾಡಿಕೊಂಡಿದ್ದಾರೆ. ಭಾರತದ 20 ಯೋಧರು ಚೀನಾ ದಾಳಿಗೆ ಬಲಿಯಾಗುತ್ತಿದ್ದಂತೆ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಚೀನಾ ವಸ್ತುಗಳನ್ನು ಬಹಿಷ್ಕರಿಸಿ, ಚೀನಾ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳಿ ಎಂದು ಘೋಷಣೆಗಳನ್ನು ಕೂಗಲಾಗುತ್ತಿದೆ.
ಹಾಗೇ ದಕ್ಷಿಣ ದೆಹಲಿಯ ಚಾಂಕ್ಯಾಪುರಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸುಮಾರು 22 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ:ಭಾರತ-ಚೀನಾ ಬಿಕ್ಕಟ್ಟು: ಕುತೂಹಲ ಮೂಡಿಸಿದ ಪ್ರಧಾನಿ ಮೋದಿಯವರ ನಡೆ…ಜೂ.19ರವರೆಗೆ ಕಾಯಬೇಕು
ಸೇನೆಯಲ್ಲಿ ಸೇವೆ ಸಲ್ಲಿಸ ಮಾಜಿ ಸೈನಿಕನೊಬ್ಬನ ನೇತೃತ್ವದಲ್ಲಿ ಚೀನಾ ರಾಯಭಾರಿ ಕಚೇರಿ ಎದುರು ಗುಂಪೊಂದು ಪ್ರತಿಭಟನೆಗೆ ಇಳಿದಿತ್ತು. ಕಚೇರಿಯನ್ನು ಮುತ್ತಿಗೆ ಹಾಕಿದ್ದರು. ಅವರನ್ನು ಮೊದಲು ಪೊಲೀಸರು ಎಚ್ಚರಿಸಿದರು. ಈ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡುವಂತಿಲ್ಲ. ಇಲ್ಲಿಂದ ಹೊರಡಿ ಎಂದು ಹೇಳಿದರೂ ಕೇಳಲಿಲ್ಲ. ಆಗ ಅನಿವಾರ್ಯವಾಗಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಇವರೊಂದಿಗೆ ಸ್ವದೇಶಿ ಜಾಗರಣ್​ ಮಂಚ್​ ಸಂಘಟನೆಯವರೂ ಸಹ ಚೀನಾ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದರು. ಒಟ್ಟು 22 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.ಚೀನಾ ರಾಯಭಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ಮೊದಲು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಅದಾದ ಬಳಿಕ ಮೆರವಣಿಗೆ ಹೊರಟಿದ್ದರು. ಮಧ್ಯದಲ್ಲೇ ಅವರನ್ನು ಪೊಲೀಸರು ತಡೆದಿದ್ದಾರೆ.ದೆಹಲಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಸೇರಿ, ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. (ಏಜೆನ್ಸೀಸ್​)ಇದನ್ನೂ ಓದಿ:‘ಗಾಲ್ವಾನ್ ಕಣಿವೆ ನಮ್ಮದು…ಭಾರತೀಯ ಯೋಧರು ಪ್ರಚೋದಿಸುವುದನ್ನು ನಿಲ್ಲಿಸಲಿ’- ಚೀನಾ ಸರ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
