ನವದೆಹಲಿ:ಹೆಚ್ಚಿನ ಅನುದಾನಕ್ಕಾಗಿ ಆಗ್ರಹಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರ ದೆಹಲಿಯ ಜಂತರ್​ ಮಂತರ್​ನಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಘೋಷವಾಕ್ಯದಡಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ದೆಹಲಿ ಪೊಲೀಸರು ಬರೀ ಅರ್ಧ ಗಂಟೆ ಅವಕಾಶ ನೀಡಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮುಂದಾಗಿದ್ದು, ಈಗಾಗಲೇ ಸಿಎಂ, ಡಿಸಿಎಂ ಹಾದಿಯಾಗಿ ಸಚಿವರು ಹಾಗೂ ಶಾಸಕರು ದೆಹಲಿಗೆ ಹಾರಿದ್ದಾರೆ. ಬುಧವಾರ (ಫೆಬ್ರವರಿ 07) ರಂದು ಬೆಳಗ್ಗೆ 11 ಘಂಟೆಗೆ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ದೆಹಲಿ ಪೊಲೀಸ್​ ನಾಳೆ ಮಧ್ಯಾಹ್ನ 12.30ರಿಂದ 1ರವರೆಗೆ ಮಾತ್ರ ಜಂತರ್ ಮಂತರ್​​ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದೆ.
ದೆಹಲಿ ಚಲೋ ಪಕ್ಷದ ಪ್ರತಿಭಟನೆಯಲ್ಲ. ಸರ್ಕಾರದ ಪ್ರತಿಭಟನೆ, ರಾಜ್ಯಕ್ಕೆ ಆಗ್ತಿರೋ ಅನ್ಯಾಯ ಸರಿಪಡಿಸಲು ಬಿಜೆಪಿ ಸಂಸದರು ಪ್ರತಿಭಟನೆ ಬರಬೇಕು ಎಂದು ಆಹ್ವಾನಿಸಿದ ಸಿಎಂ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರಿಗೂ ಪತ್ರ ಬರೆದಿದ್ದಾರೆ. ನಾಳೆ ನಡೆಯುವ ಪ್ರತಿಭಟನೆಗೆ ಹೊಸ ಟಚ್​ ಕೊಡುವ ಸಲುವಾಗಿ ಸಚಿವ ಪ್ರಿಯಾಂಕ್​ ಖರ್ಗೆ ಕನ್ನಡ ಬಾವುಟಗಳನ್ನು ದೆಹಲಿಗೆ ಕೊಂಡೊಯ್ದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
