ನವದೆಹಲಿ:ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಎಲ್ಲ ವಯೋಮಾನದವರು ಕುಸಿದು ಬೀಳುತ್ತಿದ್ದಾರೆ. ಈಗಾಗಲೇ ದೇಶಾದ್ಯಂತ ಹಲವೆಡೆ ಇಂತಹ ಘಟನೆಗಳು ಬೆಳಕಿಗೆ ಬಂದಿರುವುದು ಗೊತ್ತೇ ಇದೆ. ದೆಹಲಿಯಲ್ಲಿ ಪೊಲೀಸ್ ಪೇದೆಯೊಬ್ಬರು ಡ್ಯಾನ್ಸ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು.
ರವಿಕುಮಾರ್‌ ಮೃತ. ಹೆಡ್​​ಕಾನ್ಸಟೇಬಲ್​​ ಆಗಿ ಕೆಲಸ ಮಾಡುತ್ತಿದ್ದನು. ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸಾವನ್ನಪ್ಪುವ ಕೆಲವು ನಿಮಿಷಗಳ ಮೊದಲು ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಉತ್ತರ ಪ್ರದೇಶದ ಬಾಗ್‌ಪತ್‌ ಮೂಲದ ರವಿಕುಮಾರ್‌ 2010ರಲ್ಲಿ ದೆಹಲಿ ಪೊಲೀಸರಿಗೆ ಸೇರಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ರವಿಕುಮಾರ್ ಈಗಾಗಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು 45 ದಿನಗಳ ಹಿಂದೆ ಆಂಜಿಯೋಗ್ರಫಿಗೆ ಒಳಗಾಗಿದ್ದ ಎನ್ಮಲಾಗಿದೆ.
#Delhi: Head constable dies of#cardiacarrestwhile dancing in a farewell party. Om Shanti!https://t.co/uMiczVsaCNpic.twitter.com/yITy9AVarJ
— Dee (@DeeEternalOpt)August 29, 2024

ನಡೆದಿದ್ದೇನು?:ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಅವರು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು. ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದ ಎಸ್‌ಎಚ್‌ಒ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಪಾರ್ಟಿಗೆ ಬಂದಿದ್ದ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌, ಇತರರೊಂದಿಗೆ ಸೇರಿ  ಕುಣಿದು ಕುಪ್ಪಳಿಸಿದ. ಡ್ಯಾನ್ಸ್ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ.
ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಇದರಿಂದ ಅಲ್ಲಿಯವರೆಗೂ ಅವರೊಂದಿಗೆ ನಗುತ್ತಾ ಕುಣಿದಾಡುತ್ತಿದ್ದ ಕಾನ್ ಸ್ಟೆಬಲ್ ಸಾವನ್ನಪ್ಪಿದ್ದು, ಸಹ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
