ನವದೆಹಲಿ:ಕರೊನಾ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗುತ್ತಿರುವ ಕಾರಣ ಹಂತಹಂತವಾಗಿ ಹಲವು ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವ ದೆಹಲಿ ಸರ್ಕಾರ, ಇದೀಗ ಹೋಟೆಲ್​ ಹಾಗೂ ರೆಸ್ಟೋರಂಟ್​ಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶ ನೀಡಿದೆ.
ಜೂನ್​ 8ರಿಂದ ಹೋಟೆಲ್​, ರೆಸ್ಟೋರಂಟ್​ಗಳನ್ನು ತೆರೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅವಕಾಶ ನೀಡಿವೆ. ಆದರೆ, ಮದ್ಯ ಸರಬರಾಜಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಸರ್ಕಾರಕ್ಕೆ ಆದಾಯವೂ ಮುಖ್ಯವಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ;ಶುಭಸುದ್ದಿ…! ಮೋದಿ ಬಯಸಿದಲ್ಲಿ ತುರ್ತು ಬಳಕೆಗೆ ಸಜ್ಜಾಗುತ್ತೆ ದೇಶಿಯ ಕರೊನಾ ಲಸಿಕೆ
ಈ ಬಗ್ಗೆ ಅಗತ್ಯ ಅನುಮತಿಗಳನ್ನು ನೀಡುವಂತೆ ಅಬಕಾರಿ ಇಲಾಖೆಗೆ ದೆಹಲಿ ಉಪಮುಖ್ಯಮತ್ರಿ ಮನೀಶ್​ ಸಿಸೋಡಿಯಾ ಸೂಚನೆ ನೀಡಿದ್ದಾರೆ. ಇದಕ್ಕಾಗಿ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಅಸ್ಸಾಂ, ಪಂಜಾಬ್​, ರಾಜಸ್ಥಾನ ಮೊದಲಾದ ರಾಜ್ಯಗಳಲ್ಲಿ ಪರವಾನಗಿ ಪಡೆದಿರುವ ರೆಸ್ಟೋರಂಟ್​, ಕ್ಲಬ್​, ಹೋಟೆಲ್​ ರೂಮ್​ಗಳಲ್ಲಿ ಮದ್ಯ ಪೂರೈಸಲು ಅನುಮತಿ ನೀಡಲಾಗಿದೆ.
ಇದನ್ನೂ ಓದಿ;ಅನುಕಂಪ ಆಧಾರದ ಸರ್ಕಾರಿ ಕೆಲಸ; ಗಳಿಸಿದ್ದು ಕೆಜಿಗಟ್ಟಲೇ ಚಿನ್ನ, ಬೆಳ್ಳಿ; ಕೋಟ್ಯಂತರ ಮೌಲ್ಯದ ಸ್ವತ್ತು ವಶ
ದೆಹಲಿಯಲ್ಲಿ ಹೋಟೆಲ್​ ಹಾಗೂ ವಾರದ ಸಂತೆಗಳನ್ನು ನಡೆಸಲು ಅವಕಾಶ ನೀಡಿದ ಮರುದಿನವೇ ಈ ಆದೇಶ ಹೊರಬಿದ್ದಿದೆ. ಹೋಟೆಲ್​ಗಳನ್ನು ತೆರೆಯಲು ಅವಕಾಶ ನೀಡಿದ ಕ್ರಮಕ್ಕೆ ಕೇಂದ್ರ ಸಚಿವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಲಸ ಕಳೆದುಕೊಂಡಿದ್ದೀರಾ…? ಸರ್ಕಾರವೇ ಕೊಡುತ್ತೆ ಮೂರು ತಿಂಗಳ ಸಂಬಳ; ಅರ್ಹತೆಗಳೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 20 =
Remember me
