ನವದೆಹಲಿ:ಕಳೆದ ಕೆಲವು ದಿನಗಳಿಂದ ಉತ್ತರ ಭಾರತದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ.
ಯಮುನಾ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆ ಶಾಲಾ-ಕಾಲೇಜುಗಳು ಹಾಗೂ ಖಾಸಗಿ ಸಂಸ್ಥೆಗಳಿಗೆ ಜುಲೈ 16ರವರೆಗೂ ರಜೆ ಘೋಷಿಸಲಾಗಿದೆ.
ಲೆಫ್ಟಿನೆಂಟ್​ ಗವರ್ನರ್​ ಹಾಗೂ ದೆಹಲಿ ವಿಪತ್ತು ನಿರ್ವಹಣಾ ಮಂಡಳಿ(DDMA) ಸಭೆ ಬಳಿಕ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಜುಲೈ 16ರವರೆಗೂ ವರ್ಕ್​ ಫ್ರಮ್​ ಹೋಮ್​ ಮಾಡುವಂತೆ ಹೇಳಲಾಗಿದೆ.
Visuals from Kashmiri Gateहमने इतने सालो मे यमुना जी को जितना दिया है उसका चार गुना आज वापस मिल रहा है#Delhipic.twitter.com/WEMTGHflR1
ಇದನ್ನೂ ಓದಿ:VIDEO| ರೈಲಿನಲ್ಲಿ ಚಪ್ಪಲಿ ಹಿಡಿದು ಬಡಿದಾಡಿಕೊಂಡ ಮಹಿಳೆಯರು
ಈ ಕುರಿತು ಪ್ರತಿಕ್ರಿಯಿಸಿರುವ DDMAಯ ಹಿರಿಯ ಅಧಿಕಾರಿಯೊಬ್ಬರು ಕಾಶ್ಮೀರಿ ಗೇಟ್​ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ವಾಣಿಜ್ಯ ಕಟ್ಟಡಗಳನ್ನು ಜುಲೈ 16ರ ವರೆಗೂ ಮುಚ್ಚುವಂತೆ ಸೂಚಿಸಲಾಗಿದೆ. ISBTಗೆ ಬರುವ ಬಸ್ಸುಗಳನ್ನು ಸಿಂಘು ಬಾರ್ಡರ್​ ಬಳಿ ನಿಲ್ಲಿಸುವಂತೆ ಸೂಚಿಸಲಾಗಿದೆ.
ಯುಮುನಾ ನದಿಯೂ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಾರಣ ದೆಹಲಿಯ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆನಿಬಿಡ ಪ್ರದೇಶಗಳಲ್ಲಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + six =
Remember me
