ನವದೆಹಲಿ: ರಾಷ್ಟ್ರರಾಜಧಾನಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ವಿಸ್ತಾರಾ ಏರ್‌ಲೈನ್ಸ್ ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದೆ. ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಶ್ರೀನಗರಕ್ಕೆ ‘ಬೆದರಿಕೆ ಕರೆ’ ಬಂದ ಬಳಿಕ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲಾಯಿತು. ತಕ್ಷಣ ಭದ್ರತಾ ಪಡೆಗಳು ಕ್ರಮಕೈಗೊಂಡಿವೆ.
ಇದನ್ನು ಓದಿ :https://www.vijayavani.net/actress-anjali-defends-balayya-after-balakrishna-pushes-her
ವಿಸ್ತಾರಾ ಏರ್‌ಲೈನ್ಸ್‌ನ ಯುಕೆ-611 ವಿಮಾನದಲ್ಲಿ ಒಟ್ಟು 178 ಪ್ರಯಾಣಿಕರಿದ್ದರು. ಸುರಕ್ಷತಾ ಪ್ರೋಟೋಕಾಲ್ ಪ್ರಕಾರ, ವಿಮಾನವು ಇಳಿದ ತಕ್ಷಣ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ನಂತರ ಇಡೀ ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ತಪಾಸಣೆ ಕಾರ್ಯಾಚರಣೆ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು.
ತನಿಖೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಸ್ನಿಫರ್ ಡಾಗ್‌ಗಳನ್ನು ನಿಯೋಜಿಸಲಾಗಿತ್ತು. ವಿಮಾನವನ್ನು ಪರಿಶೀಲಿಸಿದಾಗ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಬೆದರಿಕೆಯನ್ನು ನಕಲಿ ಎಂದು ಪರಿಗಣಿಸಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಮಾಹಿತಿ ನೀಡಿದೆ. ಈ ಸಂಪೂರ್ಣ ಪರಿಶೀಲನೆ ಸಮಯದಲ್ಲಿ ರನ್ ವೇ ಕೂಡ ಬಂದ್ ಆಗಿತ್ತು. ತಪಾಸಣೆ ಮುಗಿಸಿದ ಬಳಿಕ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಪುನರಾರಂಭಗೊಂಡವು ಎಂದು ಅಧಿಕಾರಿಗಳು ತಿಳಿಸಿದರು.
ಆದರೆ, ದೂರವಾಣಿ ಕರೆ ಎಲ್ಲಿಂದ ಬಂತು ಎಂಬುದು ಇನ್ನೂ ತಿಳಿದುಬಂದಿಲ್ಲ. ಬಾಂಬ್ ಬೆದರಿಕೆ ಕರೆಯ ಮೂಲವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಅರ್ಜುನ್​ ಕಪೂರ್ ಜತೆಗೆ ಬ್ರೇಕಪ್​! ಕಡೆಗೂ ಮೌನ ಮುರಿದ 50ರ ಬೆಡಗಿ ಮಲೈಕಾ ಅರೋರಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 2 =
Remember me
