ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್​ ಅವರ ಎರಡು ದಿನಗಳ ಭಾರತ ಪ್ರವಾಸ ಅಂತಿಮ ಘಟ್ಟಕ್ಕೆ ಬಂದಿದೆ. ಪ್ರಸ್ತುತ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಟ್ರಂಪ್ ದಂಪತಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ.
ಟ್ರಂಪ್​ ದಂಪತಿಯನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮತ್ತು ಪತ್ನಿ ಸವಿತಾ ಕೋವಿಂದ್ ಆತ್ಮೀಯವಾಗಿ ಬರಮಾಡಿಕೊಂಡರು. ಅಮೆರಿಕ ಅಧ್ಯಕ್ಷರ ಗೌರವಾರ್ಥ ರಾಷ್ಟ್ರಪತಿಗಳು ಔತಣಕೂಟವನ್ನು ಆಯೋಜಿಸಿದ್ದಾರೆ.​ ಟ್ರಂಪ್​ ಪುತ್ರಿ ಇವಾಂಕ ಟ್ರಂಪ್​ ಮತ್ತು ಅಳಿಯ ಜರೇದ್​ ಕುಶ್ನರ್​ ಕೂಡ ಉಪಸ್ಥಿತರಿದ್ದಾರೆ.
ಮಂಗಳವಾರ ಬೆಳಗ್ಗೆ ಅಹಮದಾಬಾದ್​ಗೆ ಬಂದಿಳಿದ ಟ್ರಂಪ್​ ದಂಪತಿ, ಮೊದಲ ದಿನದ ಸಬರಮತಿ ಆಶ್ರಮ ಭೇಟಿ, ನಮಸ್ತೆ ಟ್ರಂಪ್​ ಕಾರ್ಯಕ್ರಮದಲ್ಲಿ ಭಾಗಿ ಹಾಗೂ ತಾಜ್​ ಮಹಲ್​ ವೀಕ್ಷಣೆ ಮಾಡಿ ದೆಹಲಿಗೆ ಆಗಮಿಸಿದ್ದರು.
ಎರಡನೇ ದಿನವಾದ ಇಂದು ಬೆಳಗ್ಗೆ ಟ್ರಂಪ್​ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ರಾಜ್​ಘಾಟ್​ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು.
ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್​ ಭೇಟಿ ನೀಡಿದರು. ಮಧ್ಯಾಹ್ನ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೇಜಿನ ಸಭೆ ನಡೆಯಿತು. ಇದೀಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರನ್ನು ಭೇಟಿ ಮಾಡಿರುವ ಟ್ರಂಪ್​ ಔತಣಕೂಟದಲ್ಲಿ ಪಾಲ್ಗೊಂಡಿದ್ದಾರೆ. ಇದು ಮುಗಿದ ಬಳಿಕ ರಾತ್ರಿ 10ಕ್ಕೆ ಟ್ರಂಪ್ ದಂಪತಿ​ ಅಮೆರಿಕಗೆ ನಿರ್ಗಮಿಸಲಿದ್ದಾರೆ.(ಏಜೆನ್ಸೀಸ್​)​
#WATCHDelhi: US President Donald Trump & First Lady Melania Trump received at Rashtrapati Bhawan by President Ram Nath Kovind and his wife Savita Kovind. A dinner banquet will be hosted by President in honour of the US President.pic.twitter.com/nUXYUR2D7R
— ANI (@ANI)February 25, 2020

Delhi: US President Donald Trump and First Lady Melania Trump at Rashtrapati Bhawan.pic.twitter.com/sCYW8Uecej
— ANI (@ANI)February 25, 2020

Delhi: US President Donald Trump and First Lady Melania Trump received at Rashtrapati Bhawan by President Ram Nath Kovind and his wife Savita Kovind. A dinner banquet will be hosted by the President in the honour of the US President.pic.twitter.com/y8g3VkjJdG
— ANI (@ANI)February 25, 2020

Delhi: US President Donald Trump and First Lady Melania Trump with President Ram Nath Kovind and his wife Savita Kovind at Rashtrapati Bhawan; Ivanka Trump and Jared Kushner also presentpic.twitter.com/Bfb76TxKcI
— ANI (@ANI)February 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 17 =
Remember me
