ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಹಾಗೂ ದೆಹಲಿಯ ಹಿರಿಯ ಪೊಲೀಸ್​ ಅಧಿಕಾರಿಗಳೊಂದಿಗೆ ಮಂಗಳವಾರ ತಡ ರಾತ್ರಿ ಮತ್ತೊಂದು ಸಭೆ ನಡೆಸಿದರು.
ಗಲಭೆ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಗಲಭೆಯನ್ನು ಸಂಪೂರ್ಣ ನಿಯಂತ್ರಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಪೊಲೀಸರಿಗೆ ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.
ಸಭೆಯ ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಹಾಗೂ ಹಿರಿಯ ಪೊಲೀಸ್​ ಅಧಿಕಾರಿಗಳು ಗಲಭೆ ನಡೆದ ಪ್ರದೇಶಗಳಾದ ಮೌಜ್‌ಪುರ, ಜಾಫ್ರಬಾದ್, ಗೋಕುಲ್‌ಪುರಿ ಮತ್ತು ಭಜನ್‌ಪುರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬುಧವಾರ ಭದ್ರತಾ ಪಡೆ ಪಥ ಸಂಚಲನ: ತೀವ್ರ ಗಲಭೆ ಪೀಡಿತ ಪ್ರದೇಶವಾದ ಪೌಜ್​ಪುರದಲ್ಲಿ ಭದ್ರತಾ ಪಡೆ ಯೋಧರು ಬುಧವಾರ ಬೆಳಗ್ಗೆ ಪಥ ಸಂಚಲನ ನಡೆಸಿ ನಾಗರಿಕರಲ್ಲಿ ಮೂಡಿದ್ದ ಭಯ ನಿವಾರಿಸಿದರು.
ಗಾಯಾಳುಗಳ ಸ್ಥಳಾಂತರ: ಗಲಭೆಯಲ್ಲಿ ಗಾಯಗೊಂಡು ಚಾಂದ್​​ಬಾಘ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 20 ಮಂದಿಯನ್ನು ಹೈಕೋರ್ಟ್​ ಸೂಚನೆ ಮೇರೆಗೆ ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೆಚ್ಚುವರಿ ಡಿಸಿಪಿ ಡಿ.ಕೆ.ಗುಪ್ತಾ ತಿಳಿಸಿದ್ದಾರೆ.ಈ ಆಸ್ಪತ್ರೆಯಲ್ಲಿ ಗಲಭೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅವುರ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
DK Gupta, Additional DCP: There were 4 bodies&20 injured victims at a hospital in Chand Bagh. We had to shift them to another hospital as per High Court orders. All the victims have been shifted to another hospital now, so that they can get proper medical treatment.#DelhiViolencehttps://t.co/nQo3E6bEPNpic.twitter.com/zPytroMYFX
— ANI (@ANI)February 26, 2020

Delhi: Security personnel conducting flag-march in Maujpur area.#DelhiViolencepic.twitter.com/FBPpeVegm0
— ANI (@ANI)February 26, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − seven =
Remember me
