ನವದೆಹಲಿ:ಈಶಾನ್ಯ ದೆಹಲಿ ಹಿಂಸಾಚಾರ ಹಿನ್ನೆಲೆಯಲ್ಲಿ ಆಪ್​ ಮುಖಂಡ, ಪಾಲಿಕೆ ಸದಸ್ಯ ತಾಹೀರ್​ ಹುಸ್ಸೇನ್​ ಅವರ ಮೇಲೆ 302 ಸೆಕ್ಷನ್​ನಡಿ ಎಫ್​ಐಆರ್​ ದಾಖಲಾಗಿದೆ.
ತಾಹೀರ್​ ಮೇಲೆ ದಯಾಳ್​ಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಅಲ್ಲದೆ, ಖಜೂರಿ ಖಾಸ್​ ಪ್ರದೇಶದಲ್ಲಿರುವ ಅವರ ಕಾರ್ಖಾನೆಗೆ ಪೊಲೀಸರು ಬೀಗ ಮುದ್ರೆ ಜಡಿದಿದ್ದಾರೆ.
ದೆಹಲಿ ಹಿಂಸಾಚಾರಕ್ಕೆ ಬಲಿಯಾದ ಗುಪ್ತಚರ ದಳದ ಅಧಿಕಾರಿ ಅಂಕಿತ್​ ಶರ್ಮಾ ಮೇಲೆ ಹಲ್ಲೆ ನಡೆಸಿದ್ದು ಆಮ್​ ಆದ್ಮಿ ಪಕ್ಷದ ನಾಯಕರು ಎಂದು ಅವರ ತಂದೆ ರೋಹಿತ್​ ಶರ್ಮಾ ಆರೋಪಿಸಿದ್ದರು. ಅದಕ್ಕೆ ಪುಷ್ಟಿ ನೀಡುವಂತೆ ಆಪ್​ ಕೌನ್ಸಿಲರ್​ ತಾಹೀರ್​ ಅವರ ಮನೆಯ ಟೆರೇಸ್​ನಲ್ಲಿ ಪೆಟ್ರೋಲ್​ ಬಾಂಬ್ ಹಾಗೂ ಕಲ್ಲುಗಳು ಪತ್ತೆಯಾಗಿದ್ದವು.
ಆದರೆ ತಾಹೀರ್​ ಹುಸ್ಸೇನ್, ಗಲಭೆಯಲ್ಲಿ ತಮಗೂ ತೊಂದರೆಯಾಗಿದೆ. ನಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಲವಂತವಾಗಿ ನನ್ನನ್ನು ಮನೆಯಿಂದ ನೂಕಿದ್ದರು ಎಂದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
