ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​, ಕೇಂದ್ರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೋಟಿಸ್​ ಜಾರಿ ಮಾಡಿದೆ.
ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದ ಬಗ್ಗೆ ಸಲ್ಲಿಕೆಯಾಗಿದ್ದ ಮೂರು ಅರ್ಜಿಗಳನ್ನು ಹೈಕೋರ್ಟ್​ ವಿಚಾರಣೆ ನಡೆಸಿತು.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ಇರುವವರನ್ನು ತನಿಖೆ ಮಾಡಿ ಪತ್ತೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅಜಯ್​​ ಗೌತಮ್​ ಎಂಬುವವರು ಅರ್ಜಿ ಸಲ್ಲಿಸಿದ್ದರು.
ಅಜಯ್ ಗೌತಮ್ ಅವರ ಮನವಿಗೆ ಸಂಬಂಧಿಸಿದ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ ಹರಿಶಂಕರ್ ಅವರ ದ್ವಿಸದಸ್ಯ ನ್ಯಾಯಪೀಠ ದೆಹಲಿ ಸರ್ಕಾರ ಮತ್ತು ಗೃಹ ಸಚಿವಾಲಯಕ್ಕೆ ಉತ್ತರ ನೀಡುವಂತೆ ಸೂಚಿಸಿದೆ.
ಅಲ್ಲದೆ ದ್ವೇಷ ಭಾಷಣ ಮಾಡಿದವರ ಮೇಲೆ ಕ್ರಮ ಜರುಗಿಸಬೇಕು. ಕಾಂಗ್ರೆಸ್​ ನಾಯಕರಾದ ರಾಹುಲ್​, ಪ್ರಿಯಾಂಕ ಗಾಂಧಿ, ಅಸದುದ್ದೀನ್ ಒವೈಸಿ ವಿರುದ್ಧ ದೂರು ದಾಖಲಿಸುವಂತೆ ಬಿಜೆಪಿ ಕಾನೂನು ಘಟಕ ಸಲ್ಲಿಸಿದ್ದ ಅರ್ಜಿಯನ್ನು ಪೀಠ ಪರಿಶೀಲಿಸಿತು.
ದೆಹಲಿ ಹೈಕೋರ್ಟ್​ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 3 ಅರ್ಜಿಗಳನ್ನು ವಿಚಾರಣೆ ನಡೆಸಿ ಉತ್ತರಿಸುವಂತೆ ಸೂಚಿಸಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
