ನವದೆಹಲಿ:ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದಡಿ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾದ (ಪಿಎಫ್​ಐ) ಅಧ್ಯಕ್ಷ ಫರ್ವೇಜ್​ ಅಹಮದ್ ಮತ್ತು ಕಾರ್ಯದರ್ಶಿ ಮಹಮ್ಮದ್​ ಇಲಿಯಾಸ್​ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ಸಂಘರ್ಷ ಏರ್ಪಟ್ಟು, ಅದು ಹಿಂಸಾಚಾರವಾಗಿ ಮಾರ್ಪಟ್ಟಿತ್ತು. ಸುಮಾರು 53 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸರು 712 ಮಂದಿಯ ವಿರುದ್ಧ ಎಫ್​ಐಆರ್​ ದಾಖಲಿಸಿ, 200 ಜನರನ್ನು ಬಂಧಿಸಿದ್ದರು.
ಹಿಂಸಾಚಾರದಲ್ಲಿ ದಂಗೆಕೋರರನ್ನು ಪ್ರಚೋದಿಸುವ ಕೆಲಸವನ್ನು ಇವರಿಬ್ಬರೂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹಾಗೇ ಈ ವೇಳೆ ಪ್ರತಿಭಟನಾಕಾರರಿಗೆ ಧನಸಹಾಯವನ್ನೂ ಮಾಡಿದ್ದಾರೆ. ಹಾಗಾಗಿ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.ಫರ್ವೇಜ್ ಮತ್ತು ಇಲಿಯಾಸ್​ನನ್ನು ದೆಹಲಿಯ ಪಟಿಯಾಲಾ ಕೋರ್ಟ್​ಗೆ ಹಾಜರುಪಡಿಸಲಾಗುವುದು ಎಂದಿದ್ದಾರೆ.(ಏಜೆನ್ಸೀಸ್​)
Delhi Police Special Cell has arrested Popular Front of India (PFI) President Parvez (pic1) and Secretary Illiyas (pic2), in connection with alleged PFI-Shaheen Bagh link.#Delhihttps://t.co/EAau7Wq8wZpic.twitter.com/ZjkLgRSxmf
— ANI (@ANI)March 12, 2020

ಶರಣಾಗುತ್ತೇನೆ ಎಂದು ಬಂದ ಆಪ್​ ಉಚ್ಚಾಟಿತ ಕೌನ್ಸಿಲರ್​ ತಾಹೀರ್​ ಹುಸೇನ್​ ಮನವಿಯನ್ನು ತಿರಸ್ಕರಿಸಿದ ಕೋರ್ಟ್​; ಮುಂದೇನಾಯ್ತು ಗೊತ್ತಾ?

ಪ್ರಧಾನಿ ಮೋದಿಯವರೊಂದಿಗೆ ಇಸ್ರೇಲ್​ ಪಿಎಂ ಬೆಂಜಮಿನ್​ ನೇತನ್ಯಾಹು ಗಂಭೀರ ಚರ್ಚೆ…!

ತಮಿಳುನಾಡಿನ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರಾ ತಲೈವಾ? ರಾಜಕೀಯಕ್ಕೆ ಇಳಿಯುವುದನ್ನು ದೃಢಪಡಿಸಿದ ನಟ ರಜನೀಕಾಂತ್ ನಿಲುವು ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
