ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ದಟ್ಟ ಮಂಜು ಆವರಿಸಿದ್ದು ವಿಮಾನ ಮತ್ತು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.
ಇದನ್ನೂ ಓದಿ:ಗಡಿ ವಿವಾದ ಸಭೆ ನಡೆಸಲು ಕರ್ನಾಟಕ – ಮಹಾರಾಷ್ಟ್ರ ವಿಫಲ: ಎರಡೂ ರಾಜ್ಯಗಳಿಗೆ ಕೇಂದ್ರ ನೋಟಿಸ್
ಭಾರತೀಯ ಹವಾಮಾನ ಇಲಾಖೆ ಪ್ರಕಾರ ನಗರದಲ್ಲಿ ಹಗಲಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 6.30ಕ್ಕೆ ದಟ್ಟವಾದ ಮಂಜು ಆವರಿಸಿದ್ದರಿಂದ ಕನಿಷ್ಠ ಮೂರು ವಿಮಾನಗಳ ಮಾರ್ಗ ಬದಲಿಸುವಂತಾಗಿತ್ತು. ಇನ್ನು ಮಾರ್ಗಕಾಣದಂತಹ ಪರಿಸ್ಥಿತಿ ಇದ್ದುದರಿಂದ ಹಲವಾರು ರೈಲುಗಳು ತಡವಾಗಿ ಓಡುತ್ತಿವೆ ಎಂದು ವರದಿಯಾಗಿದೆ.
ಮಳೆ ಸಾಧ್ಯತೆ:ಬುಧವಾರ ರಾತ್ರಿ 30-40 ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ಪರಿಸ್ಥಿತಿ ಫೆ 3 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ, ಕನಿಷ್ಠ ತಾಪಮಾನ 7.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಋತುವಿನ ಸರಾಸರಿಗಿಂತ ಕಡಿಮೆಯಾಗಿದೆ. ಮಂಗಳವಾರದವರೆಗಿನ ಅಕೃತ ಅಂಕಿಅಂಶಗಳ ಪ್ರಕಾರ ಜನವರಿ 30 ರವರೆಗೆ ದೆಹಲಿಯಲ್ಲಿ ಸರಾಸರಿ ಗರಿಷ್ಠ ತಾಪಮಾನವು 17.7 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು 13 ವರ್ಷಗಳಲ್ಲೇ ಕನಿಷ್ಠವಾಗಿದೆ.
ಇದೇ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸರಾಸರಿ ಕನಿಷ್ಠ ತಾಪಮಾನವು 6.2 ಡಿಗ್ರಿ ಸೆಲ್ಸಿಯಸ್‍ಗೆ ದಾಖಲಾಗಿದೆ, ಇದು 13 ವರ್ಷಗಳಲ್ಲಿ ಎರಡನೇ ಅತಿ ಕಡಿಮೆಯಾಗಿದೆ ಎಂದು ಡೇಟಾ ತೋರಿಸಿದೆ.
ಡ್ರೋನ್​ ಪ್ರತಾಪ್​ ಬಗ್ಗೆ ಯಾರಿಗೂ ಗೊತ್ತಿರದ ವಿಚಾರ ತಿಳಿಸಿದ ಕಾರ್ತಿಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 1 =
Remember me
