ನವದೆಹಲಿ:ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ಮೂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಶೀಘ್ರದಲ್ಲೇ ದೆಹಲಿ ಕರೊನಾ ರಾಜಧಾನಿ ಆಗುತ್ತದೆ ಎಂದು ಆಪ್​ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ.
ಸಾಂಕ್ರಾಮಿಕ ಪಿಡುಗನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಗೋಜಲು ಮಾಡಿಕೊಂಡಿದೆ. ನಗರ ಸದ್ಯದಲ್ಲೇ ಕರೊನಾ ರಾಜಧಾನಿ ಆಗಿ ಪರಿವರ್ತನೆ ಆಗಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸುಬ್ರಮಣಿಯಂ ಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಮುನಿಸಿಪಾಲಿಟಿಯ ವಿವಿಧ ವರ್ಗದ ನೌಕರರಿಗೆ ವೇತನ ಹಾಗೂ ಪಿಂಚಣಿ ನೀಡದ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆ ವೇಳೆ ಪೀಠ ಈ ಅಸಮಾಧಾನ ವ್ಯಕ್ತಪಡಿಸಿದೆ. ಕರೊನಾ ಪರೀಕ್ಷೆಯಲ್ಲಿ ಸಾಧನೆ ಮಾಡಿದೆ ಎಂದು ಸರ್ಕಾರ ಹಲವು ಬಾರಿ ಹೇಳಿದ್ದರೂ ಕರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗಿದೆ ಎಂದು ಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + twenty =
Remember me
