ಜಮ್ಮು ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಮತ್ತು ಸೇನೆ ಎನ್‌ಕೌಂಟರ್ ನಂತರ ಕಣಿವೆ ಪ್ರದೇಶದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇದನ್ನು ಓದಿ:ಪ್ರಧಾನಿ ಮೋದಿ ಮತ್ತು ಯುಎಸ್​​​​ ಅಧ್ಯಕ್ಷ ಜೋ ಬಿಡನ್ ಭೇಟಿ ಬಗ್ಗೆ ಅಮೆರಿಕ ಹೇಳಿದ್ದೇನು?
ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಹಾಗೂ ಭಯೋತ್ಪಾದನೆ ವಿರುದ್ಧ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಈ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ವಿರೋಧಿ ಕ್ರಮಕ್ಕೆ ಸಂಪೂರ್ಣ ಶಕ್ತಿ ನೀಡುವಂತೆ ಅಧಿಕಾರಿಗಳು ಪ್ರಧಾನಿ ಅವರನ್ನು ಕೇಳಿಕೊಂಡಿದ್ದಾರೆ. ಮನವಿಯನ್ನು ಆಲಿಸಿದ ಮೋದಿ ಅವರು ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸೂಚನೆಗೂ ಮುನ್ನ ಈ ಪ್ರದೇಶಗಳಲ್ಲಿ ಭದ್ರತಾ ಪಡೆಗಳ ಮತ್ತಷ್ಟು ನಿಯೋಜನೆ ಮತ್ತು ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದಕ ದಾಳಿಗಳು ನಡೆದಿವೆ. ರಿಯಾಸಿ, ಕಥುವಾ ಮತ್ತು ದೋಡಾ ಜಿಲ್ಲೆಗಳ ನಾಲ್ಕು ಸ್ಥಳಗಳಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಇದರಿಂದ ಯಾತ್ರಿಕರು ಮೃತಪಟ್ಟಿದ್ದಾರೆ. ಒಬ್ಬರು ಸಿಆರ್​ಪಿಎಫ್​​ ಯೋಧ ಕೂಡ ಹುತಾತ್ಮರಾಗಿದ್ದಾರೆ. ಇದಲ್ಲದೆ ಏಳು ಭದ್ರತಾ ಸಿಬ್ಬಂದಿ ಮತ್ತು ಅನೇಕರು ಗಾಯಗೊಂಡಿದ್ದಾರೆ. (ಏಜೆನ್ಸೀಸ್​​)
ಪ್ರಧಾನಿ ಮೋದಿ ಹೊಸ ಅಧಿಕಾರಾವಧಿಯಲ್ಲಿ ಹೊರಟಿದ್ದು ಎಲ್ಲಿಗೆ? ಏನಿದರ ಉದ್ದೇಶ.. ಇಲ್ಲಿದೆ ಕಂಪ್ಲೀಟ್​ ಡಿಟೇಲ್ಸ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
