ನವದೆಹಲಿ:ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಭರ್ಜರಿ ಬಹುಮತ ಸಾಧಿಸಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಆಮ್​ ಆದ್ಮಿ ಪಕ್ಷ ಹಾಗೂ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಅವರಿಗೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಅಭಿನಂದನಾ ಪತ್ರವನ್ನು ಬರೆದಿದ್ದಾರೆ.
ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿರುವ ಎಚ್​ಡಿಡಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅದ್ಧೂರಿ ಗೆಲುವು ದಾಖಲಿಸಿದ ಅರವಿಂದ್​ ಕೇಜ್ರಿವಾಲ್​ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಭಾರತದ ರಾಜಕಾರಣಕ್ಕೆ ಈ ಗೆಲುವು ಒಂದು ಒಳ್ಳೆಯ ಸೂಚನೆಯಾಗಿದ್ದು, ನಿಮ್ಮ ಅಭಿವೃದ್ಧಿಯ ಕಾರ್ಯಗಳು ಸಾಕಷ್ಟು ಪ್ರಭಾವ ಬೀರಿವೆ ಎಂದು ಪ್ರಶಂಸಿಸಿದ್ದಾರೆ.
ನಿಮ್ಮ ಈ ವಿಜಯದಿಂದ ಕೋಮು ಧ್ರುವೀಕರಣದಂತಹ ಹತಾಶೆ ಕಾಯ್ದೆಗಳು ಸೀಮಿತ ಅವಧಿಯನ್ನು ಹೊಂದಿವೆ ಎಂದು ಉಳಿದ ಭಾರತೀಯರು ಎಚ್ಚರಗೊಳ್ಳುತ್ತಾರೆಂಬ ವಿಶ್ವಾಸ ಇದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿಮ್ಮ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳು ಇಂದು ಮನೆ ಮಾತಾಗಿದ್ದು, ಕರ್ನಾಟಕ ಸೇರಿದಂತೆ ಭಾರತದ ಇನ್ನುಳಿದ ಭಾಗಗಳನ್ನು ಅವು ತಲುಪಲಿ. ನಿಮಗೆ ದೇವರು ಒಳ್ಳೆಯ ಆಶೀರ್ವಾದ ನೀಡಲಿ. ದೆಹಲಿ ಜನತೆಗೆ ನಿಮ್ಮ ಸೇವೆ ಹೀಗೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದ್ದಾರೆ.
ಇನ್ನು ಚುನಾವಣಾ ಫಲಿತಾಂಶಕ್ಕೆ ಬರುವುದಾರೆ, ಸದ್ಯದ ಟ್ರೆಂಡ್​ ಪ್ರಕಾರ ಒಟ್ಟು 70 ಸ್ಥಾನಗಳಲ್ಲಿ ಈಗಾಗಲೇ 55 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಆಪ್​ ಉಳಿದ 7 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ 7 ಸ್ಥಾನಗಳಲ್ಲಿ ವಿಜಯೋತ್ಸವ ಆಚರಿಸಿದ್ದು, 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್​ ಖಾತೆ ತೆರೆಯುವಲ್ಲಿ ವಿಫಲವಾಗಿದೆ.(ಏಜೆನ್ಸೀಸ್​)
.@ArvindKejriwal#DelhiResultspic.twitter.com/iinNjkS12F
— H D Devegowda (@H_D_Devegowda)February 11, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
