ಬೆಂಗಳೂರು:ರಾಷ್ಟ್ರಪತಿ ಚುನಾವಣೆಯ ರೇಸ್‌ನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆ ಗೆ ಗೌಡರಿಗೆ ಆಸಕ್ತಿ ಇಲ್ಲ ಎಂದು ಹೇಳುವ ಮೂಲಕ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಇದ್ದ ಊಹಾಪೋಹಗಳಿಗೆ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
ರಾಷ್ಟ್ರಪತಿ ಚುನಾವಣೆ ವಿಚಾರವಾಗಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಸಭೆಗೆ ಬರಲೇ ಬೇಕು ಎಂದು ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಭಾಗಿಯಾಗಿದ್ದರು, ನಾವು ಕೂಡ ಭಾಗಿಯಾಗಿದ್ದೆವು. ಜೂ.20 ರಂದು ಮತ್ತೆ ಸಭೆ ಕರೆಯಲಿದ್ದಾರೆ ಎಂದರು.
ಈಗಲ್ ಟನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, 28 ಎಕರೆ ಸರ್ಕಾರದ ಸುಪರ್ದಿಗೆ ತೆಗೆದುಕೊಂಡ ಮೇಲೆ ಈವರೆಗೂ ಕಾನೂನು ಬದ್ಧವಾಗಿ ನಡೆದುಕೊಂಡಿಲ್ಲ. ಈ ಕುರಿತು ಚರ್ಚೆಗೆ ಸಿದ್ದನಿದ್ದೇನೆ. ಈಗಾಗಲೇ ಆ ಬಗ್ಗೆ ವಿಧಾನ ಸಭೆಯಲ್ಲಿ ಮಾತಾಡಿದ್ದೇನೆ. 28 ಎಕರೆ ಸರ್ಕಾರದ ಸುಪರ್ದಿಗೆ ತೆಗೆದುಕೊಂಡ ಮೇಲೆ. ಕಾನೂನು ಬದ್ದವಾಗಿ ಜಮೀನು ನೀಡಿಲ್ಲ. ವ್ಯಾಪಾರ ಮಾಡಿಕೊಂಡು ಕುತಿದ್ದೀರಾ? ಕೋರ್ಟ್ ಮುಂದೆ ಏನು ಹೇಳಿದ್ದೀರಿ? ನೈಸ್ ಕಂಪನಿಗೆ ಸ್ವೇಚ್ಛಾಚಾರವಾಗಿ ಭೂಮಿ ನೀಡಿದ ಕಾಂಗ್ರೆಸ್-ಬಿಜೆಪಿ ಸರ್ಕಾರಗಳು ಈ ಸಂಸ್ಥೆಗೆ ಏನು ಮಾಡಿವೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
26 ವರ್ಷಗಳಲ್ಲೇ ಅತ್ಯಧಿಕ ಮಳೆ; ಒಂದೇ ದಿನದಲ್ಲಿ 972 ಮಿ.ಮೀ. ವರ್ಷಧಾರೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 3 =
Remember me
