ಮುಂಬೈ:ಏಕನಾಥ್​ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಎಳೆದಿದ್ದಾರೆ.
ಮೊದ ಮೊದಲು ದೇವೇಂದ್ರ ಫಡ್ನವಿಸ್​ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತಾದರೂ, ಕೊನೇ ಗಳಿಗೆಯಲ್ಲಿ ಶಿಂಧೆ ಅವರನ್ನೇ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಫಡ್ನವಿಸ್​ ಡಿಸಿಎಂ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.
ಮಹಾರಾಷ್ಟ್ರದಲ್ಲಿ ಇದೇನೂ ಹೊಸ ಬೆಳವಣಿಗೆಯಲ್ಲ, ಸಿಎಂ ಆಗಿ ಮೆರೆದವರು ನಂತರ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಹಲವು ಉದಾಹರಣೆಗಳಿವೆ. ಇವರಲ್ಲಿ ಐದನೇಯವರು ಫಡ್ನವಿಸ್​ ಆಗಿದ್ದಾರೆ. ಈ ಮೊದಲು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಮಾಡಿದ್ದವರು ನಂತರ ಡಿಸಿಎಂ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಆ ನಾಲ್ವರ ಕುರಿತು ಇಲ್ಲಿದೆ ಮಾಹಿತಿ.
ಶಂಕರ್​ರಾವ್​ ಚವಾಣ್​​:ಕಾಂಗ್ರೆಸ್​ ನಾಯಕರಾಗಿದ್ದ ಇವರು 1975ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿತ್ತಾರೆ. ಇವರ ಬದಲಾಗಿ 1977ರಲ್ಲಿ ವಸಂತ್​ದಾದ ಪಾಟೀಲ್​ ಅವರನ್ನು ಸಿಎಂ ಆಗಿ ನೇಮಕ ಮಾಡಲಾಗುತ್ತದೆ. ಈ ಬಳಿಕ ಶರದ್​​ ಪವಾರ್​​ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸುತ್ತಾರೆ.
ಶಿವಾಜಿರಾವ್​ ಪಾಟೀಲ್​ ನಿಲಂಗೆಕರ್​:1985ರಲ್ಲಿ ಮುಖ್ಯಮಂತ್ರಿಯಾಗಿದ್ದ ಇವರು ನಂತರ ಸುಶೀಲ್​ ಕುಮಾರ್ ಶಿಂಧೆ ಅವರ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ನಾರಾಯಣ ರಾಣೆ:1999ರಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಇವರು ಕೂಡ ವಿಲಾಸ್​ ರಾವ್​ ದೇಶ್​ಮುಖ್​ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗುತ್ತಾರೆ.
ಅಶೋಕ್​ ಚವಾಣ್​:2008 ರಿಂದ 2010ರಲ್ಲಿ ಮಹಾರಾಷ್ಟ್ರದ ಸಿಎಂ ಆಗಿದ್ದ ಚವಾಣ್​, ಉದ್ಧವ್​ ಠಾಕ್ರೆ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಸೇವೆ ಸಲ್ಲಿಸುತ್ತಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 17 =
Remember me
