ಹೈದರಾಬಾದ್:ಸಾರ್ವಜನಿಕ ಹಿತಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ನೀಡುತ್ತಲೇ ಬಂದಿರುವ ಇನ್​ಫೊಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇದೀಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಇಂದು ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ‘ಧರ್ಮ ರಥ’ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.
ಸುಮಾರು 42 ಲಕ್ಷ ರೂಪಾಯಿ ವೆಚ್ಚದ ಈ ಧರ್ಮ ರಥ ವಾಹನ ನೀಡಿದ ನಂತರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸುಧಾ ಮೂರ್ತಿ ಮತ್ತು ಕುಟುಂಬದ ಕೆಲವು ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ರಮೇಶ್ ರೆಡ್ಡಿ, ಸುಧಾ ಮೂರ್ತಿ ಅವರ ಸಹೋದರಿ ಹಾಗೂ ಸ್ನೇಹಿತರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆ ಎಂದು ಹೇಳಲಾಗಿದೆ.

ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + seven =
Remember me
