ನವದೆಹಲಿ:ನೂತನ್​ ಸಂಸತ್​ ಭವನದಲ್ಲಿ ಭದ್ರತಾ ಲೋಪ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸೇರಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಳೆಯ ಸಂಸತ್​ ಭವನದ ಮೇಲೆ 2001ರಲ್ಲಿ ನಡೆದ ಉಗ್ರ ದಾಳಿಗೆ ಇಂದು 22 ವರ್ಷ ತುಂಬಿದ್ದು, ಇದೇ ದಿನ ಮತ್ತೊಂದು ಕರಾಳ ಘಟನೆಗೆ ನೂತನ ಸಂಸತ್​ ಭವನ ಸಾಕ್ಷಿಯಾಗಿದೆ.
ಬಂಧಿತರನ್ನು 42 ವರ್ಷದ ನೀಲಂ ಮತ್ತು 25 ವರ್ಷದ ಅಮೋಲ್ ಶಿಂಧೆ ಎಂದು ಗುರುತಿಸಲಾಗಿದೆ. ನೀಲಂ ಹರಿಯಾಣದ ಹಿಸಾರ್ ನಿವಾಸಿ ಮತ್ತು ಅಮೋಲ್ ಶಿಂಧೆ ಮಹಾರಾಷ್ಟ್ರದ ಲಾತೂರ್ ನಿವಾಸಿ. ಈ ಇಬ್ಬರು ಸದನ ಹೊರಗೆ ಹಳದಿ ಹೊಗೆ ಹೊರಸೂಸುವ ವಸ್ತುವನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅವರಿಬ್ಬರನ್ನು ಬಂಧಿಸಲಾಗಿದೆ. ಇದೇ ಸಂದರ್ಭದಲ್ಲಿ ಸದನ ಒಳಗೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಯುವಕರು ಹಳದಿ ಬಣ್ಣ ಹೊರಸೂಸುವ ವಸ್ತುವನ್ನು ಹಿಡಿದು ಸ್ಪೀಕರ್​ ಓಂ ಬಿರ್ಲಾ ಕಚೇರಿಯತ್ತ ನುಗ್ಗಿದರು. ಇದನ್ನು ಕಂಡು ಭಯಭೀತರಾದ ಸಂಸದರು ದಿಕ್ಕಾಪಾಲಾಗಿ ಓಡಿದರು. ಮಾಹಿತಿ ಪ್ರಕಾರ ಆರೋಪಿಗಳಲ್ಲಿ ಸಾಗರ್​ ಶರ್ಮ ಎಂಬಾತ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರ ಹೆಸರಲ್ಲಿ ಪಾಸ್​ ಪಡೆದು ನುಗ್ಗಿದ್ದಾನೆ. ಮತ್ತೊಬ್ಬ ಆರೋಪಿ ಮೈಸೂರು ಮೂಲದ ಇಂಜಿನಿಯರ್​ ಮನೋರಂಜನ್​ ಡಿ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.
ಆರೋಪಿಗಳಿಬ್ಬರು ಸಂಸದ ಪ್ರತಾಪ್​ ಸಿಂಹ ಅವರ ಹೆಸರಿನಲ್ಲಿ ಪಾಸ್​ ಪಡೆದಿದ್ದಾರೆ ಎಂದು ಉಚ್ಛಾಟಿತ ಬಿಎಸ್​ಪಿ ಸಂಸದ ಡ್ಯಾನಿಶ್​ ಅಲಿ ಗಂಭೀರ ಆರೋಪ ಮಾಡಿದ್ದಾರೆ. ಸಂಸದ ಪ್ರತಾಪ್​ ಸಿಂಹ ಆಪ್ತ ಸಹಾಯಕ ಸಾಗರ್​ ಶರ್ಮ ಹೆಸರಲ್ಲಿ ಇಬ್ಬರು ಆರೋಪಿಗಳು ಪಾಸ್​ ಪಡೆದಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲೂ ತಿಳಿದುಬಂದಿದೆ.
VIDEO | “Two people jumped from the public gallery and there was smoke. There was chaos all around. Both of them were overpowered by security officials,” says MP Danish Ali on reported security breach in Lok Sabha.#Parliamentpic.twitter.com/fJIFOnkgdb
— Press Trust of India (@PTI_News)December 13, 2023

ಸರ್ವಾಧಿಕಾರತ್ವ ಮತ್ತು ಮಹಿಳೆಯ ಮೇಲಿನ ಅಪರಾಧಗಳನ್ನು ಸಹಿಸಲಾಗದು ಎಂದು ಆರೋಪಿಗಳು ಸಂಸತ್ತಿನ ಹೊರಭಾಗದಲ್ಲಿ ಘೋಷಣೆ ಸಹ ಕೂಗಿದ್ದಾರೆ.
ಘಟನೆಯ ಬಗ್ಗೆ ಮಾತನಾಡಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಶೂನ್ಯ ಸಮಯದಲ್ಲಿ ನಡೆದ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ಸಹ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇದು ಕೇವಲ ಹೊಗೆ ಎಂದು ಕಂಡುಬಂದಿದೆ. ಹೊಗೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು ಹೇಳಿದರು. ಸದ್ಯ ಇಬ್ಬರನ್ನೂ ಬಂಧಿಸಲಾಗಿದ್ದು, ಅವರಲ್ಲಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಸತ್ತಿನ ಹೊರಗಿದ್ದ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು. (ಏಜೆನ್ಸೀಸ್​)
ಬಿಗಿ ಭದ್ರತೆಯ ನಡುವೆಯೂ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ; ಸದನದಿಂದ ಹೊರಗೆ ಓಡಿಹೋದ ಸಂಸದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
