ಕೋಬ್ರಾ:ಮನೆಯಲ್ಲಿ ಹಲ್ಲಿಗಳು ಕಾಣುವುದು ಸಾಮಾನ್ಯ. ಆದರೆ ಈ ಹಲ್ಲಿ ಯಾರನ್ನಾದರೂ ಕೊಲ್ಲುತ್ತದೆ ಎಂದರೆ ನಂಬಲೂ ಸಹ ವಿಚಿತ್ರ ಎನಿಸುತ್ತದೆ. ಇಂತಹ ಘಟನೆಯೊಂದು ಛತ್ತೀಸ್‌ಗಢದ ಕೋಬ್ರಾದಲ್ಲಿ ನಡೆದಿದ್ದು, ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮುಗ್ಧ ಮಗು ಮೃತಪಟ್ಟಿರುವ ಘಟನೆ ನಡೆದಿದೆ.ಇದನ್ನೂ ಓದಿ:ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಮೂವರು ಸ್ನೇಹಿತರು
ರಾಜ್‌ಕುಮಾರ್ ಚಂಡೆ ಎಂಬುವರ ಕುಟುಂಬವು ನಾಗಿನಬಂಡಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಇವರ ಮೂರನೇ ಮಗ ಜಗದೀಶ್​​ನೇ ಮೃತ ದುರ್ದೈವಿಯಾಗಿದ್ದಾನೆ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ ವೇಳೆ ಆತನ ತಾಯಿ ಮನೆಗೆಲಸ ಮಾಡುತ್ತಿದ್ದಳು. ಸ್ವಲ್ಪ ಸಮಯದ ನಂತರ ಮಲಗಿದ್ದ ಜಗದೀಶ ಮಗನನ್ನು ನೋಡಿದಾಗ ಆತ ನಿಶ್ಚಲನಾಗಿ ಬಿದ್ದಿದ್ದ.ಕೂಡಲೇ ಅನುಮಾನಗೊಂಡ ತಾಯಿಯು ಬಾಲಕನ ಹತ್ತಿರ ಬಂದಾಗ ಆತನ ಬಾಯಲ್ಲಿ ಹಲ್ಲಿ ಸತ್ತು ಬಿದ್ದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದು ಕೂಡಲೇ ಅಕ್ಕಪಕ್ಕದವರಿಗೆ ತಿಳಿಸಿದ್ದಾಳೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.ಬಾಲಕ ಹಲ್ಲಿ ನುಗ್ಗಿ ಸತ್ತಿದ್ದಾನೆಯೇ ಅಥವಾ ಉಸಿರುಕಟ್ಟುವಿಕೆಯಿಂದ ಮೃತಪಟ್ಟಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
