ಗೋವಾ:ಗೋವಾದ ಪ್ರಸಿದ್ದ ಬೀಚ್​ ಕ್ಲಬ್​​ ಒಂದರಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು ಐಪಿಎಸ್​ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಎ.ಕೋನ್​ ಅಮಾನತ್ತಾದ ಅಧಿಕಾರಿ ಎಂದು ತಿಳಿದು ಬಂದಿದೆ. 2009ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ ಇವರು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ(AGMUT) ಕೇಡರ್​ನ ಅಧಿಕಾರಿಯಾಗಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕೇಂದ್ರ ಗೃಹ ಇಲಾಖೆಯೂ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.
ಡಿಐಜಿ ಶ್ರೇಣಿಯ ಅಧಿಕಾರಿಯಾಗಿರುವ ಕೋನ್​ ಸೋಮವಾರ ತಡರಾತ್ರಿ ಮಹಿಳಾ ಪ್ರವಾಸಿಗರೊಬ್ಬರ ಜೊತೆ ಬೀಚ್​ ಕ್ಲಬ್​ ಒಂದರಲ್ಲಿ ಅನುಚಿತವಾಗಿ ವರ್ತಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರ್ಕಾರ ಸಲ್ಲಿಸಿದ ವರದಿಯನ್ನು ಆಧರಿಸಿ ಕೇಂದ್ರ ಗೃಹ ಇಲಾಖೆ ಕ್ರಮಕೈಗೊಂಡಿದೆ.
ಇದನ್ನೂ ಓದಿ:ನಿರೀಕ್ಷೆಗೂ ಮೀರಿ ಹಿಟ್​ ಆದ ಗದರ್​-2; ವಾರದ ದಿನವೂ 35 ಕೋಟಿ ರೂಪಾಯಿ ಗಳಿಕೆ
ಡಿಐಜಿ ಶ್ರೇಣಿಯ ಅಧಿಕಾರಿಯಾದ ಇವರನ್ನು ಆರಂಭದಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಪೊಲೀಸ್​ ಮಹಾನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು.
ಮಹಿಳೆ ಜೊತೆ ಅಧಿಕಾರಿ ಅಸಭ್ಯವಾಗಿ ವರ್ತಿಸಿದ ವಿಚಾರವನ್ನು ಶಾಸಕರಾದ ವಿಜಯ್​ ಸರ್​ದೇಸಾಯಿ, ಮೈಕೆಲ್​ ಲೋಬೋ ರಾಜ್ಯ ವಿಧಾನಸಭೆ =ಯಲ್ಲಿ ಪ್ರಸ್ತಾಪಿಸಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
