ಶಿರಡಿ:ಸಾಯಿ ಬಾಬಾನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ತಂಗಲು ಮತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಏನೂ ತೊಂದರೆ ಇಲ್ಲ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್​ ಮುಗ್ಲಿಕರ್​ ತಿಳಿಸಿದ್ದಾರೆ.
ನಾಳೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರೊಂದಿಗೆ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ಮಾಧ್ಯಮಗಳಲ್ಲಿ ಇಂದು (ಜ.19)ದಿಂದ ಸಾಯಿಬಾಬಾನ ದೇಗುಲ ಬಂದ್​ ಇರುತ್ತದೆ ಎಂದು ಸುದ್ದಿಯಾಗಿತ್ತು. ಆದರೆ ದೇವಾಸ್ಥಾನ ತೆರೆದಿದ್ದು, ಬಂದ ಭಕ್ತರಿಗೆ ದರ್ಶನಕ್ಕೆ, ತಂಗಲು ಹಾಗೂ ಪ್ರಸಾದಕ್ಕೆ ತೊಂದರೆ ಇಲ್ಲ ಎಂದು ಮುಗ್ಲಿಕರ್​ ಮಾಹಿತಿ ನೀಡಿದ್ದಾರೆ.
ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರು ಪ್ರಭಾನಿ ಜಿಲ್ಲೆಯ ಪಥ್ರಿ ಎಂಬ ಗ್ರಾಮವೇ ಸಾಯಿ ಬಾಬಾ ಅವರ ಜನ್ಮ ಸ್ಥಳ ಎಂದು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಉದ್ಧವ್​ ಠಾಕ್ರೆ ಅವರ ಈ ಹೇಳಿಕೆಯಿಂದಾಗಿ ಶಿರಡಿಯ ಸಾಯಿ ಬಾಬಾ ಸಂಸ್ಥಾನ ಟ್ರಸ್ಟ್​ ಭಾನುವಾರದಿಂದ ದೇಗುಲ ಬಂದ್​ ಮಾಡಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
