ನವದೆಹಲಿ:ಆಡಳಿತ ಸುಧಾರಣೆ ಉದ್ದೇಶದಿಂದ ಕೇಂದ್ರದ ನಾನಾ ಇಲಾಖೆಗಳಲ್ಲಿ 45 ಉನ್ನತ ಹುದ್ದೆಗಳಿಗೆ ವಿಶೇಷ ಪರಿಣಿತರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳ ಹುದ್ದೆಗಳ ನೇಮಕಕ್ಕೆ ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್​ಸಿ) ಶನಿವಾರ ಪ್ರಕಟಣೆಯನ್ನು ಹೊರಡಿಸಿದೆ.
ಸಾಮಾನ್ಯವಾಗಿ ಇಂಥ ಹುದ್ದೆಗಳನ್ನು ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್​ಒಎಸ್) ಮುಂತಾದ ಅಖಿಲ ಭಾರತ ಸೇವೆಗಳ ಅಧಿಕಾರಿಗಳು ಮತ್ತು ಇತರ ಗ್ರೂಪ್ ಎ ಸೇವೆಯ ಅಧಿಕಾರಿಗಳು ನಿರ್ವಹಿಸುತ್ತಾರೆ. ಆದರೆ, ಅವರನ್ನೆಲ್ಲ ಕೈಬಿಟ್ಟು ಲ್ಯಾಟರಲ್ ಎಂಟ್ರಿ ಮಾದರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇರವಾಗಿ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಯುಪಿಎಸ್​ಸಿ ಶನಿವಾರ ಪ್ರಕಟಣೆ ಹೊರಡಿಸಿದೆ. 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪ ಕಾರ್ಯದರ್ಶಿಗಳ ಹುದ್ದೆಗಳ ನೇಮಕಕ್ಕೆ ಜಾಹೀರಾತನ್ನು ಹೊರಡಿಸಲಾಗಿದೆ.
ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕ/ಉಪ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳ ಲ್ಯಾಟರಲ್ ನೇಮಕಕ್ಕೆ ಭಾರತ ಸರ್ಕಾರ ಕೋರಿಕೆ ಸಲ್ಲಿಸಿದೆ ಎಂದು ಜಾಹೀರಾತು ತಿಳಿಸಿದೆ. ಅದರನ್ವಯ, ದೇಶ ಕಟ್ಟುವಲ್ಲಿ ಕೊಡುಗೆ ಸಲ್ಲಿಸುವ ಬಯಸುವ ಪ್ರತಿಭಾನ್ವಿತ ಹಾಗೂ ಪ್ರೇರೇಪಿತ ಭಾರತೀಯ ಪ್ರಜೆಗಳು ಆನ್​ಲೈನ್​ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಯುಪಿಎಸ್​ಸಿ ಹೇಳಿದೆ. ನವದೆಹಲಿ ಕೇಂದ್ರ ಕಾರ್ಯಾಲಯವಾಗಿರುವ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಈ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು; ಕಾರಣ ಹೀಗಿದೆ ನೋಡಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + 1 =
Remember me
