ನವದೆಹಲಿ:ಚುನಾವಣಾ ಬಾಂಡ್ ಪ್ರಕರಣದಲ್ಲಿ ಎಸ್‌ಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಅಂದರೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಇದರಲ್ಲಿ ಎಸ್‌ಬಿಐಗೆ ಸೆಡ್ಡು ಹೊಡೆದಿರುವ ಸುಪ್ರೀಂ ಕೋರ್ಟ್ ನಾಳೆಯೊಳಗೆ ಚುನಾವಣಾ ಬಾಂಡ್‌ಗಳ ಡೇಟಾವನ್ನು ನೀಡುವಂತೆ ಸೂಚಿಸಿದೆ.
ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, ಮಾ.12ರ ಒಳಗಡೆ ಈ ಕುರಿತ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಎಸ್‌ಬಿಐಗೆ ಸುಪ್ರೀಂಕೋರ್ಟ್‌ ಆದೇಶಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ.
ಇದೇ ವೇಳೆ ನೀವು 26 ದಿನಗಳ ಕಾಲ ಏನು ಮಾಡುತ್ತಿದ್ದಿರಿ?” ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.
#WATCH| Petitioner Jaya Thakur says, "Supreme Court understood the seriousness of the matter and issued strict order for the bank (SBI) to submit all documents by tomorrow. I think this is a great decision, I welcome it…"https://t.co/I7MP4bAo2Spic.twitter.com/EQAq7D7vHo
— ANI (@ANI)March 11, 2024

ಸುಪ್ರೀಂ ಕೋರ್ಟ್ ಹೇಳಿದ್ದೇನು?ಫೆಬ್ರವರಿ 15ರಂದು ನೀಡಲಾದ ತೀರ್ಪಿನ ಪ್ರಕಾರ, ಬ್ಯಾಂಕ್ ಮಾರ್ಚ್ 6ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ಒದಗಿಸಬೇಕಾಗಿತ್ತು. SBI ಬಾಂಡ್‌ಗಳನ್ನು ಖರೀದಿಸಿದವರು, ಮುಖಬೆಲೆ, ಬಾಂಡ್‌ಗಳನ್ನು ಎನ್‌ಕ್ಯಾಶ್ ಮಾಡಿದಂತಹ ಮಾಹಿತಿಯನ್ನು ಹಂಚಿಕೊಳ್ಳಬೇಕಾಗಿತ್ತು. ಆದರೆ ಮಾ.4ರಂದು ಈ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಎಸ್‌ಬಿಐ ಮಾಹಿತಿ ಹಂಚಿಕೆಗೆ ಜೂ.30ರವರೆಗೆ ಕಾಲಾವಕಾಶವನ್ನು ಕೋರಿತ್ತು. ಮಾ.6ರೊಳಗೆ ಮಾಹಿತಿ ಹಂಚಿಕೊಳ್ಳಿ ಎಂದು ಹೇಳಿದ್ದ ಸುಪ್ರೀಂಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿತ್ತು.
ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ ಅರ್ಜಿದಾರರಾದ ಜಯಾ ಠಾಕೂರ್, ಸುಪ್ರೀಂ ಕೋರ್ಟ್ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡಿದೆ ಮತ್ತು ನಾಳೆಯೊಳಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಬ್ಯಾಂಕ್ ಗೆ ಕಟ್ಟುನಿಟ್ಟಾದ ಆದೇಶವನ್ನು ನೀಡಿದೆ. ಇದು ಉತ್ತಮ ನಿರ್ಧಾರ ಎಂದು ನಾನು ಭಾವಿಸುತ್ತೇನೆ, ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
VIDEO | ಟಿಕೆಟ್ ಇಲ್ಲದೆ ಮೆಟ್ರೋ ನಿಲ್ದಾಣ ಪ್ರವೇಶಿಸಿದ ಮಗ, ಪಾಠ ಕಲಿಸಿದ ತಾಯಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 9 =
Remember me
