ನವದೆಹಲಿ:ಪಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಹೊಸ ಸಂಸತ್​ ಭವನದ ದ್ವಾರದಲ್ಲಿ ಪ್ರದರ್ಶನಕ್ಕೆ ಇಡಬೇಕು ಎಂದು ಶಿವಸೇನೆ(ಉದ್ಧವ್​ ಠಾಕ್ರೆ ಬಣ) ಸಂಸದ ಸಂಜಯ್​ ರಾವುತ್​ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂಜಯ್​ ರಾವುತ್​​ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ದಾಖಲೆಗಳನ್ನು ಏಕೆ ಗೌಪ್ಯವಾಗಿರಿಸಲಾಗಿದೆ. ಇದು ಜನರ ಮನಸ್ಸಿನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ ಎಂದು ಹೇಳಿದ್ಧಾರೆ.
ಇದನ್ನೂ ಓದಿ:ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ
ಕೆಲವರು ಪ್ರಧಾನಿ ಅವರು ಪದವಿ ಪಡೆದಿರುವುದು ಸುಳ್ಳು ಎಂದು ಹೇಳುತ್ತಿದ್ದಾರೆ. ಆದರೆ, ರಾಜ್ಯಶಾಸ್ತ್ರದಲ್ಲಿ ಪದವಿ ಪಡೆಯುವುದು ಐತಿಹಾಸಿಕ ಮತ್ತು ಕ್ರಾಂತಿಕಾರಿ. ಆದ್ದರಿಂದ ಅವರ ಪದವಿ ಪ್ರಮಾಣ ಪತ್ರಗಳನ್ನು ನೂತನ ಸಂಸತ್​ ಭನವದ ದ್ವಾರದಲ್ಲಿ ಪ್ರದರ್ಶಿಸಬೇಕು ಎಂದಿದ್ದಾರೆ.
ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಪ್ರಧಾನಿ ಮೋದಿ ಅವರ ಪದವಿ ವಿವರ ಕೇಳಿದ್ದನ್ನು ಪ್ರಶ್ನಿಸಿದ್ದಕ್ಕೆ ಗುಜರಾತ್​​ ನ್ಯಾಯಾಲಯ 25,000 ಸಾವಿರ ರೂಪಾಯಿ ದಂಡ ವಿಧಿಸಿದ ಕುರಿತು ಪ್ರತಿಕ್ರಿಯಿಸಿರುವ ರಾವುತ್​ ಅದರಲ್ಲಿ ಮುಚ್ಚಿಡುವಂಥದ್ದು ಏನಿದೆ. ಈ ಕುರಿತು ಸ್ವತಃ ಪ್ರಧಾನಿ ಅವರೇ ಖುದ್ದು ಸ್ಪಷ್ಟನೆ ನೀಡಬೇಕೆಂದು ಎಂದು ಸಂಜಯ್​ ರಾವುತ್​ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seven =
Remember me
