ಪಣಜಿ:ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಬೆನ್ನಲ್ಲೇ ಇದೀಗ ಗೋವಾದ ಕಾಂಗ್ರೆಸ್​​ನಲ್ಲೂ ಭಿನ್ನಮತ ಸ್ಫೋಟಗೊಂಡಿದ್ದು, ಇಬ್ಬರು ಶಾಸಕರನ್ನು ಅನರ್ಹಗೊಳಿಸಬೇಕೆಂದು ಕಾಂಗ್ರೆಸ್​ ವಿಧಾನಸಭೆಯ ಸ್ಪೀಕರ್​ಗೆ ಮನವಿ ಮಾಡಿದೆ.
ಬಿಜೆಪಿ ಜತೆ ಸಂಪರ್ಕ ಹೊಂದಿರುವ 11 ಶಾಸಕರ ಪೈಕಿ ಇಬ್ಬರು ಶಾಸಕರಾದ ದಿಗಂಬರ್​ ಕಾಮತ್​ ಮತ್ತು ಮೈಕೆಲ್​ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅನರ್ಹಗೊಳಿಸಬೇಕೆಂದು ಕೋರಿದೆ. ಈ ಇಬ್ಬರು ಶಾಸಕರು ಆಡಳಿತರೂಢ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿರುವುದರಿಂದ ಕೂಡಲೇ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕೆಂದು ಸ್ಪೀಕರ್​ಗೆ ಮನವಿ ಮಾಡಿಕೊಂಡಿದೆ.
ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ದಿನೇಶ್ ಗುಂಡೂರಾವ್ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಅವರು ದಿನೇಶ್ ಗುಂಡೂರಾವ್ ಅವರ ಹೇಳಿಕೆ ಆಘಾತ ಮತ್ತು ದಿಗ್ಭ್ರಮೆ ಮೂಡಿಸಿದೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಸ್ಪೀಕರ್ ಗೆ ಮನವಿ ಮಾಡಿದೆ.
ಈ ಇಬ್ಬರು ಶಾಸಕರು ಬಿಜೆಪಿಗೆ ಸೇರಲು ಪ್ರಯತ್ನಿಸುತ್ತಿದ್ದು,ದಿಗಂಬರ್ ಕಾಮತ್ ವಿರುದ್ಧ ಅನೇಕ ಪ್ರಕರಣಗಳಿದ್ದು ಇವುಗಳಿಂದ ರಕ್ಷಣೆ ಪಡೆಯಲು ಪಕ್ಷಾಂತರಕ್ಕೆ ಮುಂದಾಗಿದ್ರೆ, ಮೈಕೆಲ್ ಲೋಬೋ ಅಧಿಕಾರ ಮತ್ತು ಸ್ಥಾನದ ಆಸೆಗಾಗಿ ಕೈ ಕೊಡುವ ಪ್ರಯತ್ನದಲ್ಲಿದ್ದಾರೆ ಎಂದು ಕಾಂಗ್ರೆಸ್​ ಉಸ್ತುವಾರಿ ದಿನೇಶ್ ಗುಂಡೂರಾವ್​ ಹೇಳಿದ್ದಾರೆ.(ಏಜೆನ್ಸೀಸ್​)
ಶಿವಸೇನೆ ಶಾಸಕರ ಅನರ್ಹ ಪ್ರಕ್ರಿಯೆಗೆ ಸುಪ್ರೀಂಕೋರ್ಟ್​ ತಡೆ: ವಿಚಾರಣೆ ಮುಂದೂಡಿಕೆ

ಜುಲೈ 21ಕ್ಕೆ ಖುದ್ದು ಹಾಜರಾಗಿ: ಇಡಿಯಿಂದ ಸೋನಿಯಾ ಗಾಂಧಿಗೆ ಹೊಸ ನೋಟಿಸ್​ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + sixteen =
Remember me
