ನವದೆಹಲಿ:ಶಿಕ್ಷಕನೊಬ್ಬ ಎರಡು ವರ್ಷಗಳಿಂದ ಸಂಬಳ ಸಿಕ್ಕಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಆತನ ಡೆತ್​ ನೋಟ್​ನಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಆತನ ಪತ್ನಿಯ ಹೆಸರಿರುವುದಾಗಿ ಹೇಳಲಾಗಿದೆ.
ರೋಹಿಣಿ ಪ್ರದೇಶದ ಖಾಸಗಿ ಶಾಲೆಯೊಂದರ ಶಿಕ್ಷಕ ತನೂಪ್ ಜೋಹರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ, ಸಹೋದರ ಹಾಗೂ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮುನ್ನ ಡೆತ್​ ನೋಟ್ ಬರೆದಿಟ್ಟಿದ್ದಾರೆ.
ಎರಡು ವರ್ಷಗಳಿಂದ ಸಂಬಳಕ್ಕಾಗಿ ಕೇಳಿದರೂ ಶಾಲೆಯ ಆಡಳಿತದವರು ಸಂಬಳ ಕೊಡುತ್ತಿಲ್ಲ. ನಮ್ಮ ಶಾಲೆ ಬಿಜೆಪಿ ಮಾಜಿ ಶಾಸಕ ಹಾಗೂ ಅವರ ಪತ್ನಿಗೆ ಸೇರಿದ್ದು, ನನ್ನ ಸಾವಿಗೆ ಅವರೇ ಕಾರಣ ಎಂದು ಅವರು ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಶಾಲೆಯ ಆಡಳಿತ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಈ ಹಿಂದೆ 2020ರಲ್ಲಿಯೇ ತನೂಪ್ ತಾವು ಕೆಲಸ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಯಿಂದ ಸಂಬಳ ಬಂದಿಲ್ಲವೆಂದು ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಆದರೆ ಎಚ್ಚೆತ್ತುಕೊಳ್ಳದ ಆಡಳಿತ, ಅವರಿಂದ ಆನ್​ಲೈನ್​ ತರಗತಿಗಳನ್ನು ಮಾಡಿಸುತ್ತಿತ್ತೇ ಹೊರೆತು ಸಂಬಳ ಕೊಟ್ಟಿರಲಿಲ್ಲ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ. (ಏಜೆನ್ಸೀಸ್)
ಕರೊನಾ ಆಸ್ಪತ್ರೆ ಮೇಲೆ ಗುಂಡಿನ ದಾಳಿ ನಡೆಸಿದ ಮಾಜಿ ಯೋಧ! ಓರ್ವ ರೋಗಿ ಬಲಿ

ವರ್ಜಿನಿಟಿ ಕಳೆದುಕೊಳ್ಳಲು ಸರಿಯಾದ ವಯಸ್ಸು ಯಾವುದು? ಅಮ್ಮನಿಗೇ ಪ್ರಶ್ನಿಸಿದ ಆಲಿಯಾ ಕಶ್ಯಪ್

ಮಗ ಎಂದುಕೊಂಡಿದ್ದವ ನನ್ನ ಚಿಕ್ಕಪ್ಪನಾದ! ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಆಡುತ್ತಿದ್ದ ಆಟವನ್ನು ಬಿಚ್ಚಿಟ್ಟ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
