ನವದೆಹಲಿ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿ ಹೊಸ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ.
ಇನ್ನು ಸರ್ಕಾರ ರಚನೆ ಸರ್ಕಸ್​ ದೆಹಲಿ ತಲುಪಿದ್ದು ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್​ ಹೈ ಕಮಾಂಡಿಗೆ ಕಗ್ಗಂಟ್ಟಾಗಿ ಪರಿಣಮಿಸಿದೆ.
ಇನ್ನು ಕಾಂಗ್ರೆಸ್​ ಸರ್ಕಾರ ರಚಿಸಲಿರುವ ಬೆನ್ನಲ್ಲೇ ಮುಖ್ಯಮಂತ್ರಿ ರೇಸ್​ನಲ್ಲಿ ರಾಜ್ಯ ನಾಯಕರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಮುಖವಾಗಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.
ಇನ್ನು ಕಾಂಗ್ರೆಸ್​ ಹೈಕಮಾಂಡ್​ ಈ ಇಬ್ಬರು ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದು ಈ ಇಬ್ಬರು ನಾಯಕರು ತಮ್ಮ ಪಟ್ಟು ಸಡಿಲಿಸದಂತೆ ಕಾಣುತ್ತಿದ್ದಾರೆ.
ಇನ್ನು ಕಾಂಗ್ರೆಸ್​ ಹೈಕಮಾಂಡ್​ ಬಳಿ ಮಾತನಾಡಿರುವ ಡಿಕೆಶಿ ನನಗೆ ಮೊದಲ ಎರಡು ವರ್ಷ ಸಿಎಂ ಸ್ಥಾನ ಕೊಡುವುದಾದರೆ ಕೊಡಿ. ಇಲ್ಲವಾದರೆ ನನಗೆ ಏನೂ ಬೇಡ ಎಂದು ಗುಡುಗಿದ್ದಾರೆ.
ಶಾಸಕ ಸ್ಥಾನವೂ ಬೇಡ. ನನ್ನ ಪಾಡಿಗೆ ನಾನಿರುವೆ. ನಾನು ವ್ಯವಹಾರಸ್ಥ, ವ್ಯವಹಾರ ಮಾಡಿಕೊಂಡಿರುವೆ ಎಂದು ಹೈಕಮಾಂಡ್​ ಬಳಿ ಡಿಕೆಶಿ ಖಡಕ್​ ಆಗಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಹಿಂದುತ್ವ ಧರ್ಮವಲ್ಲ, ಬಜರಂಗದಳ ಗೂಂಡಾಗಳ ಗುಂಪು: ದಿಗ್ವಿಜಯ್​ ಸಿಂಗ್​
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಸುರೇಶ್​ ನಮ್ಮಣ್ಣ ಯಾವುದೇ ಕಾರಣಕ್ಕೂ ಜಗ್ಗಲ್ಲ ಹಿಂದೇನೂ ಜಗ್ಗಿಲ್ಲ ಈಗಲೂ ಅಷ್ಟೇ ಎಂದು ತಮ್ಮ ಸಹೋದರನ ಪರ ಬ್ಯಾಟ್​ ಬೀಸಿದ್ದಾರೆ.
ಇನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮುಖ್ಯಮಂತ್ರಿ ಆಕಾಂಕ್ಷಿಗಳ ಜೊತೆ ಪ್ರತ್ಯೇಕವಾಗಿ ಸಭೆ ನಡೆಸುವ ಮೂಲಕ ಇಬ್ಬರು ನಾಯಕರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಇವರಿಬ್ಬರು ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸಂಜೆ 5:00 ಘಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿ.ಕೆ. ಶಿವಕುಮಾರ್​ ಹಾಗಗೂ 6:00 ಘಂಟೆಗೆ ಸಿದ್ದರಾಮಯ್ಯ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + sixteen =
Remember me
