ಬೆಂಗಳೂರು:ಕರೊನಾ ವೈರಸ್​ ಹಾಗೂ ಲಾಕ್​ಡೌನ್​ ಹಿನ್ನೆಲೆಯಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಅನುಮತಿ ಸಿಕ್ಕಿದೆ.
ಕೋವಿಡ್‌-19 ಮಾರ್ಗಸೂಚಿಯ ಪ್ರಕಾರ ಜೂನ್ 14 ರಂದು ನಡೆಯಬೇಕಾಗಿದ್ದ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಣೆ ಮಾಡಲಾಗಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅಡ್ಡಿ ಮಾಡಿಲ್ಲ.‌ ಕರೊನಾ ವೈರಸ್​ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ನಿರಾಕರಿಸಲಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ:‘ಪಾಕಿಸ್ತಾನ್​ ಜಿಂದಾಬಾದ್’​ ಎಂದ ಅಮೂಲ್ಯಾಗೆ ಜಾಮೀನು ನಿರಾಕರಿಸಿದ ಕೋರ್ಟ್​
ಇದೀಗ ಪದಗ್ರಹಣ ಕಾರ್ಯಕ್ರಮಕ್ಕೆ ಷರತ್ತು ವಿಧಿಸಿರುವ ಅವರು, ಲಾಕ್​ಡೌನ್​ ಮಾರ್ಗಸೂಚಿ ಅನ್ವಯ ಹೆಚ್ಚು ಜನ ಸೇರಿಸದೆ ಕಾರ್ಯಕ್ರಮ ಆಯೋಜಿಸಲು ಯಾವುದೇ ತೊಂದರೆಯಿಲ್ಲ.‌ ಜನಸಂದಣಿಯಾಗದಂತೆ ಎಚ್ಚರ ವಹಿಸಿ ಅವರು ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ಶಿವಕುಮಾರ್ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಪದಗ್ರಹಣ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.
ಈ ಬಗ್ಗೆ ತನ್ನ ಟ್ವಿಟರ್​ ಖಾತೆಯಲ್ಲಿ ಖುಷಿ ಹಂಚಿಕೊಂಡಿರುವ ಡಿ.ಕೆ.ಶಿವಕುಮಾರ್​, ‘ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಪಕ್ಷದ ಮುಖಂಡರ ಜತೆ ಚರ್ಚೆ ಮಾಡಿದ ನಂತರ ಹೊಸ ದಿನಾಂಕವನ್ನು ನಿಗದಿ ಪಡಿಸಲಾಗುವುದು’ ಎಂದಿದ್ದಾರೆ.
ಇದನ್ನೂ ಓದಿ:ಜೂನ್​ 15ರಿಂದ ಮತ್ತೊಮ್ಮೆ ದೇಶಾದ್ಯಂತ ಸಂಪೂರ್ಣ ಲಾಕ್​ಡೌನ್​ ; ಇಲ್ಲಿದೆ ಫ್ಯಾಕ್ಟ್​ಚೆಕ್​
ಶಿವಕುಮಾರ್​ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಎರಡು ಬಾರಿ ಅನುಮತಿಯನ್ನು ನಿರಾಕರಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ಡಿಕೆಶಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಇದು ಕಾಂಗ್ರೆಸ್​ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಕಾನೂನು ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು.
Thank you@CMofKarnatakafor permitting us to go ahead with 'Prathigna' event. A new date will be confirmed in due course after discussing with party leaders shortly.
— DK Shivakumar (@DKShivakumar)June 11, 2020

1018 ಊರುಗಳ ಸ್ಪೆಲ್ಲಿಂಗ್​ ಬದಲಾಯಿಸಿದ ಸರ್ಕಾರ, ಇನ್ಮುಂದೆ ಹೇಗಿರತ್ತೆ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × five =
Remember me
