ಚೆನ್ನೈ:ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ: ಡಿಎಂಕೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಸ್ಟಾಲಿನ್​!
ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್​ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು.
இரு மாநிலங்களுக்கு இடையே கலவரத்தை தூண்டும் வகையிலும், தமிழ்நாட்டு மக்களை இழிவுப்படுத்தியும் பேசிய ஒன்றிய அமைச்சர் ஷோபா மற்றும் பாஜக மீது நடவடிக்கை மேற்கொள்ளுமாறு இந்திய தேர்தல் ஆணையத்தில் கழக அமைப்புச் செயலாளர் திரு@RSBharathiDMKஅவர்கள் புகார்!pic.twitter.com/XZObRlkxEA
— DMK (@arivalayam)March 20, 2024

ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದೆ.
To my Tamil brothers & sisters,I wish to clarify that my words were meant to shine light, not cast shadows. Yet I see that my remarks brought pain to some – and for that, I apologize. My remarks were solely directed towards those trained in the Krishnagiri forest,1/2
— Shobha Karandlaje (@ShobhaBJP)March 19, 2024

ಶೋಭಾ ಕರಂದ್ಲಾಜೆ ಕ್ಷಮೆಯಾಚನೆ:ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಕೇಳಿದ್ದಾರೆ.
ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, “ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ, ನನ್ನ ಮಾತುಗಳು ಬೆಳಕು ಚೆಲ್ಲುವ ಉದ್ದೇಶವನ್ನು ಹೊಂದಿದ್ದವು, ನೋವು ಉಂಟುಮಾಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎನ್ನುವುದನ್ನು ನೋಡಿದ್ದೇನೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು, ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಾತ್ರ ನಾನು ಟೀಕೆ ಮಾಡಿದ್ದೇನೆ. ತಮಿಳುನಾಡಿನ ಜನತೆಗೆ ನಾನು ಮನಃಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪೋಸ್ಟ್ ಮಾಡಿದ್ದಾರೆ.
ಐಪಿಎಲ್​ ಆರಂಭಕ್ಕೂ ಮುನ್ನವೇ ಮನೀಶ್ ಪಾಂಡೆ ವಿರುದ್ಧ ರಸೆಲ್‍ ಶಾಕಿಂಗ್​ ಕಾಮೆಂಟ್​: ಕಾರಣ ಹೀಗಿದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + thirteen =
Remember me
