ನವದೆಹಲಿ:ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ರಾಷ್ಟ್ರ ರಾಜಕಾರಣದಲ್ಲಿ ಸದ್ದು ಮಾಡಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್​ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ತಮಿಳುನಾಡಿನ ಆತಿಥ್ಯದಲ್ಲಿ ಜನವರಿ 19 ರಿಂದ 31ರ ವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್​ ಗೇಮ್ಸ್​ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಉದಯನಿಧಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
Glad to have invited Hon’ble Indian Prime Minister, Thiru@narendramodiin New Delhi today for the Opening Ceremony of the Khelo India Youth Games to be held in Chennai on January 19th, 2024.On behalf of the Tamil Nadu Government, I requested the Prime Minister for the…pic.twitter.com/p3rYnUxmqX
ಇದನ್ನೂ ಓದಿ:ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರ ಅರೆಸ್ಟ್​
ಪ್ರಧಾನಿ ಭೇಟಿ ಬಳಿಕ ಮಾತನಾಡಿದ ಸಚಿವ ಉದಯನಿಧಿ, ತಮಿಳುನಾಡು ಸಿಎಂ ಸ್ಟಾಲಿನ್​ ಅವರ ಆದೇಶದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಖೇಲೋ ಇಂಡಿಯಾ ಯೂತ್​ ಗೇಮ್ಸ್​ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದ್ದೇನೆ. ಇದರ ಜೊತೆಗೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ತಮಿಳುನಾಡಿನ ಸಾರ್ವಜನಿಕ ಪ್ರಾಮುಖ್ಯತೆಯ ಬಗ್ಗೆ, ವಿಶೇಷವಾಗಿ ತಮಿಳುನಾಡಿನ ಕ್ರೀಡೆಗಳ ಬಹುಮುಖಿ ಅಭಿವೃದ್ಧಿಯ ಬಗ್ಗೆ ಪ್ರಧಾನಿಯವರೊಂದಿಗೆ ಚರ್ಚಿಸಲಾಗಿದೆ. ಸಭೆಯಲ್ಲಿ, ಸಿಎಂ ಟ್ರೋಫಿ ಗೇಮ್ಸ್ 2023 ಮತ್ತು ತಮಿಳುನಾಡು ಆಯೋಜಿಸಿದ್ದ ಏಷ್ಯನ್ ಪುರುಷರ ಹಾಕಿ ಚಾಂಪಿಯನ್​​​ಶಿಪ್‌ನ ಯಶಸ್ವಿ ನಿರ್ವಹಣೆಯನ್ನು ಪ್ರದರ್ಶಿಸುವ ಕಾಫಿ ಟೇಬಲ್ ಪುಸ್ತಕವನ್ನು ಪ್ರಧಾನಿಗೆ ನೀಡಲಾಗಿದೆ ಎಂದು ಸಚಿವ ಉದಯನಿಧಿ ಸ್ಟಾಲಿನ್​ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 12 =
Remember me
