ಚೆನ್ನೈ:ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಹಲವಾರು ವಿಧಗಳಲ್ಲಿ ಆಮೀಷ ಒಡ್ಡುತ್ತಾರೆ. ಆದರೆ, ಇದಕ್ಕೆಲ್ಲ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಚುನಾವಣಾ ಆಯೋಗ ಚಾಪೆ ಕೆಳಗೆ ತೂರಿದರೆ ಕೆಲವು ರಾಜಕೀಯ ಮುಖಂಡರು ಮತದಾರರನ್ನು ಸೆಳೆಯಲು ರಂಗೋಲಿ ಕೆಳಗೆ ತೂರುತ್ತಾರೆ. ಇಂತಹದ್ದೇ ಘಟನೆ ತಮಿಳುನಾಡಿನಲ್ಲಿ ನಡೆಯುತ್ತಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ನಾಯಕ ವೇಲುಮಣಿ ಅವರು ಮತದಾರರಿಗೆ ಆಮೀಷ ಒಡ್ಡಲು ಗೂಗಲ್ ಫೇ, ಫೋನ್​ ಫೇ ಬಳಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಡಿಎಂಕೆ ಸಂಘಟನಾ ಕಾರ್ಯದರ್ಶಿ ಡಿಎಸ್ ಭಾರತಿ ಅವರು ಈ ಗಂಭೀರ ಆರೋಪವನ್ನು ಎಐಎಡಿಎಂಕೆ ನಾಯಕರ ಮೇಲೆ ಮಾಡಿದ್ದಾರೆ.
ಇದನ್ನೂ ಓದಿ:ಸಚಿವ ಈಶ್ವರಪ್ಪ ನಡೆಗೆ ಬಸವರಾಜ ಬೊಮ್ಮಾಯಿ ಅಸಮಾಧಾನ
ವೇಲುಮಣಿ ಅವರು ಮತದಾರರಿಗೆ ಅವರ ಮೊಬೈಲ್ ನಂಬರ್​ಗಳನ್ನು ಪಡೆದು ಗೂಗಲ್ ಫೇ ಫೋನ್ ಪೇ ಮೂಲಕ ಹಣ ನೀಡುತ್ತಿದ್ದಾರೆ. ಈ ಮೂಲಕ ಮತದಾರರಿಗೆ ಆಮೀಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ಈ ಬಗ್ಗೆ ಆರ್​ಬಿಐ ಸಹಾಯ ಪಡೆಯುವುದಾಗಿ ಹೇಳಿದೆ. ಆದರೆ, ತಮ್ಮ ಮೇಲಿನ ಆರೋಪಗಳನ್ನು ಎಐಎಡಿಎಂಕೆ ನಾಯಕರು ತಳ್ಳಿ ಹಾಕಿದ್ದಾರೆ.
ಒಟ್ಟಿನಲ್ಲಿ ಪಾರದರ್ಶಕವಾಗಿ ನಡೆಯಬೇಕಾಗಿರುವ ಚುನಾವಣೆಯಲ್ಲೂ ಕೆಲವರು ಉನ್ನತ ತಂತ್ರಜ್ಞಾನ ಬಳಸಿ ಮತದಾರರಿಗೆ ಆಮೀಷ ಒಡ್ಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ.
ಜಮ್ಮುವಿನಲ್ಲಿ ತಿಮ್ಮಪ್ಪನ ದೇವಾಲಯ ! 25 ಹೆಕ್ಟೇರ್ ಭೂಮಿ ಮಂಜೂರು

‘ಮೊಸಳೆ ಕಣ್ಣೀರು ಹಾಕ್ತಾರೆ’ ಎನ್ನುವುದರ ಹಿಂದಿನ ಕಥೆಯೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seventeen =
Remember me
