ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮನವಿ ಮಾಡಿ ಡಿಎಂಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ತಮಿಳುನಾಡು ವಿಧಾನಸಭೆಯಲ್ಲಿ 2017ರಲ್ಲಿ ನಡೆದ ವಿಶ್ವಾಸಮತ ಯಾಚನೆ ವೇಳೆ ಈ ಶಾಸಕರು ಮುಖ್ಯಮಂತ್ರಿ ವಿರುದ್ಧ ಮತಚಲಾಯಿಸಿದ್ದರು. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕೆಂದು ಡಿಎಂಕೆ ಆಗ್ರಹಿಸುತ್ತ ಬಂದಿದೆ. ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎಸ್​.ಎ ಬೊಬ್ಡೆ ನೇತೃತ್ವದ ನ್ಯಾಯಪೀಠಕ್ಕೆ ಡಿಎಂಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತುರ್ತು ವಿಚಾರಣೆಗೆ ಇದನ್ನು ಪರಿಗಣಿಸುವುದಾಗಿ ಭರವಸೆ ನೀಡಿತು.
ಇತ್ತೀಚೆಗೆ ಮಣಿಪುರ ಸಚಿವರ ಪ್ರಕರಣದಲ್ಲಿ ಅನರ್ಹತೆ ಸಂಬಂಧಿಸಿದ ವಿಚಾರವನ್ನು ನಾಲ್ಕು ವಾರದಲ್ಲಿ ನಿರ್ಧರಿಸುವಂತೆ ಸ್ಪೀಕರ್​ಗೆ ಕೋರ್ಟ್ ಸೂಚಿಸಿತ್ತು. ಇದನ್ನು ಆಧರಿಸಿ ಡಿಎಂಕೆ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್​ ಅಪೆಕ್ಸ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.ಡಿಎಂಕೆ ನಾಯಕರು ಈ ಹಿಂದೆ 2018ರ ಡಿಸೆಂಬರ್​ನಲ್ಲಿ ಮದ್ರಾಸ್ ಹೈಕೋರ್ಟ್​ನಲ್ಲೂ ಈ ಪ್ರಕರಣದ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್​ ಈ ಅರ್ಜಿಯನ್ನು ತಳ್ಳಿಹಾಕಿತ್ತು. (ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seventeen + nineteen =
Remember me
