ಲಖನೌ:ಭೂವ್ಯಾಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ಕೊತ್ವಾಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಣಸ್ಯಾಮ್​ ತಿವಾರಿ (53) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸುಲ್ತಾನಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸೋಮನ್​ ಬರ್ಮಾ, ವೃತ್ತಿಯಲ್ಲಿ ವೈದ್ಯರಾಗಿರುವ ಗಣಶ್ಯಾಮ್​ ತಿವಾರಿ ನಾರಾಯಣಪುರದಲ್ಲಿ ಜಾಗವೊಂದನ್ನು ಖರೀದಿದ್ದರು. ಜಾಗವೂ ಸರಸ್ವತಿ ಶಿಶು ಮಂದಿರದ ಹಿಂಭಾಗ ಇದ್ದ ಕಾರಣ ಕೆಲವರು ಈ ಜಾಗ ತಮ್ಮದೆಂದು ಖ್ಯಾತೆ ತೆಗೆದಿದ್ದರು.
ಇದನ್ನೂ ಓದಿ:ಏಷ್ಯನ್​ ಗೇಮ್ಸ್​ನಲ್ಲಿ ಪದಕಗಳ ಬೇಟೆ; ಐದು ಬೆಳ್ಳಿ, ಎರಡು ಕಂಚು ಗೆದ್ದ ಭಾರತ
ಈ ಸಂಬಂಧ ಇತ್ತೀಚಿಗೆ ಅವರು ಪೊಲೀಸ್​ ಠಾಣೆಯಲ್ಲಿ ದೂರನ್ನು ಸಹ ದಾಖಲಿಸಿದ್ದರು. ಶನಿವಾರ ಮಧ್ಯಾಹ್ನ ಅವರು ತಮ್ಮ ಹಾಗ ವೀಕ್ಷಿಸಲೆಂದು ತೆರಳಿದಾಗ ಆರೋಪಿಗಳು ಅವರ ಮೇಲೆ ದಾಳಿ ಮಾಡಿದ್ದು, ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಣಶ್ಯಾಮ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ.
ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೆ ಆರೋಪಿಗಳನ್ನು ಬಂಧಿಸಿ ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸುಲ್ತಾನಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸೋಮನ್​ ಬರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
