ಚೆನ್ನೈ:ಕಾಂಚೀಪುರಂನಲ್ಲಿ 28 ವರ್ಷದ ವೈದ್ಯರೊಬ್ಬರು ಗುರುವಾರ ರಾತ್ರಿ ತನ್ನ ಗರ್ಲ್​ಫ್ರೆಂಡ್​ ಜೊತೆಗೆ ಜಗಳವಾಡಿ ಸುಮಾರು 40 ಲಕ್ಷ ರೂ. ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡು ಗಾಬರಿಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಧರ್ಮಪುರಿಯ 28 ವರ್ಷದ ಕವಿನ್, ಕಳೆದ ವರ್ಷ ಕಾಂಚೀಪುರಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ ಆ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಎರಡು ವರ್ಷಕ್ಕೂ ಹೆಚ್ಚು ಕಾಲ ಅದೇ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಸಂಬಂಧ ಹೊಂದಿದ್ದ.
ಪೊಲೀಸರ ಪ್ರಕಾರ, ಕವಿನ್ ಮತ್ತು ಮಹಿಳೆ ಕಾಂಚೀಪುರಂ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೈವ್ ಮಾಡಲು ಹೋಗಿದ್ದರು. ಬಳಿಕ ರಾಜಕುಲಂ ಗ್ರಾಮದ ಕೊಳದ ಬಳಿ ಕಾರನ್ನು ನಿಲ್ಲಿಸಿದ್ದಾರೆ. ಹರಟೆ ಹೊಡೆಯುತ್ತಿದ್ದಾಗ ಇಬ್ಬರ ನಡುವೆ ಜಗಳ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕವಿನ್ ಖಾಲಿ ಬಾಟಲಿಯನ್ನು ತೆಗೆದುಕೊಂಡು ಕಾರಿನಲ್ಲಿದ್ದ ಇಂಧನ ಬಾಟಲಿಗೆ ತುಂಬಿಸಿಕೊಳ್ಳಲು ಪ್ರಾರಂಭಿಸಿದ. ನಂತರ ಆತನ ಗೆಳತಿ ತಡೆಯಲು ಯತ್ನಿಸಿದರೂ ಆತ ಕಾರಿನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ.
ದಾರಿಹೋಕರು ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ತಂಡ ಸುಮಾರು ಒಂದು ಗಂಟೆ ಹರಸಾಹಸ ಮಾಡಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಈ ನಡುವೆ ಕಾಂಚೀಪುರಂ ತಾಲೂಕು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕವೀನ್‌ನನ್ನು ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nine =
Remember me
