ಮುಂಬೈ:ದೇಶದಾದ್ಯಂತ ಇಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ. ಆದರೆ ಅಲ್ಲೊಂದು ವೈದ್ಯ ದಂಪತಿ ಮಾತ್ರ ತಮ್ಮ ಜೀವನವನ್ನೇ ಕೊನೆಗಾಣಿಸಿಕೊಂಡಿದ್ದಾರೆ. ಮದುವೆಯಾಗಿ ಒಂದು ತಿಂಗಳಲ್ಲೇ ದಾಂಪತ್ಯವೊಂದು ಕೊನೆಯಾಗಿದೆ.
ಮಹಾರಾಷ್ಟ್ರದ ಪುಣೆಯ ಅಂಕಿತಾ (26) ಹಾಗೂ ಆಕೆಯ ಪತಿ ನಿಖಿಲ್ ಶೆಂಡ್ಕರ್ (28) ಮೃತ ದುರ್ದೈವಿಗಳು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಒಂದು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದಾಗಿನಿಂದಲೂ ಅವರಿಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಜಗಳ ಆಗುತ್ತಿತ್ತಂತೆ. ಪ್ರತಿ ದಿನ ಒಂದಿಲ್ಲೊಂದು ವಿಚಾರದಲ್ಲಿ ದಂಪತಿ ಜಗಳ ಆಡಿಕೊಳ್ಳುತ್ತಿದ್ದರಂತೆ.
ಬುಧವಾರ ನಿಖಿಲ್ ಕೆಲಸ ಮುಗಿಸಿ ಮನೆಗೆ ಬಂದು ಯಾರೊಂದಿಗೋ ಫೋನ್​ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಮತ್ತೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿದ್ದು, ಅಂಕಿತಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಅದಾದ ಸ್ವಲ್ಪ ಹೊತ್ತಿನಲ್ಲಿ ನಿಖಿಲ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು, ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅದಾದ ನಂತರ ದೇಹಗಳನ್ನು ಅಂತ್ಯಸಂಸ್ಕಾರ ಮಾಡಲು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)
ಟಾಯ್ಲೆಟ್​ನಲ್ಲಿದ್ದಾಗಲೇ ಮಗು ಜನನ; ಹುಟ್ಟಿದ ಮಗುವನ್ನು ಮುದ್ದಾಡುವುದು ಬಿಟ್ಟು ಹೊಡೆದು ಕೊಂದ ತಾಯಿ!

ಯಮುನಾ ನದಿಗೆ ಹಾರಿದ ಸೋಶಿಯಲ್ ಮೀಡಿಯಾ ಸ್ಟಾರ್! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಆತ್ಮಹತ್ಯೆಯ ದೃಶ್ಯ

11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
