ಅಸ್ಸಾಂ:ದತ್ತು ಪಡೆದ ನಾಲ್ಕು ವರ್ಷದ ಬಾಲಕಿಯನ್ನು ನಿಂದಿಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ವೈದ್ಯ ದಂಪತಿಯನ್ನು ಗುವಾಹಟಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂಗೀತಾ ದತ್ತಾ ಹಾಗೂ ಡಾ ವಲ್ಲಿಯುಲ್ ಇಸ್ಲಾಂ ಬಂಧಿತರು. ಸಂಗೀತಾ ಮೇಘಾಲಯದ ರಿ-ಭೋಯ್ ಜಿಲ್ಲೆಯಿಂದ ಮನೋವೈದ್ಯರಾಗಗಿದ್ದಾರೆ. ಈಕೆ ಪತಿ ಕೂಡಾ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದತ್ತು ಮಗಳಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ.
ಟೆರೇಸ್ ಮೇಲಿನ ಕಂಬಕ್ಕೆ ಬಾಲಕಿಯ ಕೈಗಳನ್ನು ಕಟ್ಟಲಾಗಿದೆ ಎಂಬ ಮಾಹಿತಿ ಸಿಕ್ಕಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಲಾಗಿದೆ. ಆಕೆಯ ದೇಹದಲ್ಲಿ ಹಲವಾರು ಗಾಯಗಳು ಮತ್ತು ಸುಟ್ಟ ಗುರುತುಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಒಂದೇ ಸಮಯದಲ್ಲಿ ಗರ್ಭಿಣಿಯರಾದ ನಾಲ್ವರು ಸಹೋದರಿಯರು!
“ಮೊದಲಿಗೆ, ವೈದ್ಯ ದಂಪತಿ ಬಾಲಕಿ ತಮ್ಮದೇ ಮಗು ಎಂದು ಹೇಳಿದರು, ಆದರೆ ತನಿಖೆಯ ಸಮಯದಲ್ಲಿ, ಅವಳು ಅವರ ಮಗು ಅಲ್ಲ, ಅವರು ಅವಳನ್ನು ದತ್ತು ಪಡೆದಿದ್ದಾರೆಂದು ಗೊತ್ತಾಗಿದೆ. ನಾವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದಾಗ, ಅವಳ ದೇಹದ ಮೇಲೆ ಗಾಯಗಳು ಕಂಡುಬಂದವು. ಮತ್ತು ಆಕೆಯ ದೇಹದ ಮೇಲೆ ಸುಟ್ಟ ಗಾಯದ ಗುರುತುಗಳಿವೆ. ತನಗೆ ದಂಪತಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಬಾಲಕಿ ನಮಗೆ ತಿಳಿಸಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಲ್ಟನ್ ಬಜಾರ್ ಪೊಲೀಸ್ ಠಾಣೆಯಲ್ಲಿ ವೈದ್ಯ ದಂಪತಿ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಬಾಲಾಪರಾಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
‘ಮೋಚಾ’ ಸೈಕ್ಲೋನ್ ಅಬ್ಬರ; 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 15 =
Remember me
