ನವದೆಹಲಿ: ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ್ದಕ್ಕೆ ಕರೊನಾ ಪೀಡಿತ ಮಹಿಳೆಯೊಬ್ಬಳು ಮೃತಪಟ್ಟಿದ್ದರಿಂದ ಮೃತಳ ಸಂಬಂಧಿಕರು ಆಸ್ಪತ್ರೆಯ ವೈದ್ಯರನ್ನು ಅಟ್ಟಾಡಿಸಿಕೊಂಡು ಥಳಿಸಿರುವ ಘಟನೆ ದೆಹಲಿಯಲ್ಲಿ ಮಂಗಳವಾರ ನಡೆದಿದೆ.
ಈಶಾನ್ಯ ದೆಹಲಿಯಲ್ಲಿನ ಅಪೋಲೊ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
67 ವರ್ಷದ ಮಹಿಳೆಯೊಬ್ಬರು ಕರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಐಸಿಯು ಬೆಡ್ ಅವಶ್ಯವಿತ್ತು. ಆದರೆ ಅಪೋಲೊ ಆಸ್ಪತ್ರೆಯ ವೈದ್ಯರು ಐಸಿಯು ಬೆಡ್ ನಿರಾಕರಿಸಿದ್ದಕ್ಕೆ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಮೃತಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಬೆಳಿಗ್ಗೆ 8 ರಿಂದ 10 ಗಂಟೆಯ ನಡುವೆ ಈ ಘಟನೆ ನಡೆದಿದೆ. ಆಸ್ಪತ್ರೆಯ ಸೆಕ್ಯೂರಿಟಿಗಳು ವೈದ್ಯರನ್ನು ರಕ್ಷಿಸಿದ್ದಾರೆ.
https://twitter.com/scribe_prashant/status/1387010058765041668
ದೆಹಲಿಯಲ್ಲಿನ ಕರೊನಾ ದುಸ್ಥಿತಿಗೆ ಇದು ನಿದರ್ಶನವಾಗಿದೆ. ಇನ್ನು ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಕರೊನಾ ಸೋಂಕಿಗೆ 312 ಜನ ಮೃತಪಟ್ಟಿದ್ದು, 21000 ಹೊಸ ಪ್ರಕರಣಗಳು ಪತ್ತೆಯಾಗಿವೆ.
ವೈರಲ್ ವಿಡಿಯೋ: ಸೋನಿಯಾ, ರಾಹುಲ್​ರನ್ನು ಅಣಕಿಸಿದ ಪಾನೀಯ ಜಾಹೀರಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
