ಮೊರಾದಾಬಾದ್​:ಕರೊನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕರೆದೊಯ್ಯಲು ಬಂದ ವೈದ್ಯರು ಹಾಗೂ ಪೊಲೀಸರ ಮೇಲೆ ನೂರಾರು ಜನರಿದ್ದ ಗುಂಪು ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದೆ. ಆಂಬುಲೆನ್ಸ್​ ಹಾಗೂ ಪೊಲೀಸ್​ ವಾಹನಗಳನ್ನು ಧ್ವಂಸಗೊಳಿಸಿದೆ.
ಕರೊನಾ ಸೋಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪಶ್ಚಿಮ ಉತ್ತರಪ್ರದೇಶದ ಪಟ್ಟಣವಾದ ಮೊರಾದಾಬಾದ್​ನ ಹೃದಯಭಾಗದಲ್ಲಿರುವ ನವಾಬ್​ಪುರ ಕಾಲನಿಯನ್ನು ಸೀಲ್​ಡೌನ್​ ಮಾಡಲಾಗಿದೆ. ಇಲ್ಲಿದ್ದ ವ್ಯಕ್ತಿಯೊಬ್ಬ ಕೋವಿಡ್​-19 ನಿಂದಾಗಿ ಮೃತಪಟ್ಟಿದ್ದ.
ಮೃತಪಟ್ಟ ಕುಟುಂಬದೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಆಂಬುಲೆನ್ಸ್​ನಲ್ಲಿ ಕರೆತರಲು ವೈದ್ಯರ ತಂಡ ತೆರಳಿತ್ತು. ಜತೆಗೆ ಪೊಲೀಸ್​ ಸಿಬ್ಬಂದಿ ಕೂಡ ಇದ್ದರು. ಕುಟುಂಬದ ಸದಸ್ಯರು ಆಂಬುಲೆನ್ಸ್​ ಹತ್ತುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ವೈದ್ಯರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ. ಘಟನೆಯಲ್ಲಿ ವಾಹನಗಳು ಜಖಂಗೊಂಡಿವೆ. ಆಂಬುಲೆನ್ಸ್​ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಅಮಿತ್​ ಪಾಠಕ್​ ಹೇಳಿದ್ದಾರೆ.
ಕರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ಸಾರ್ವಜನಿಕರ ಸ್ವತ್ತುಗಳಿಗೆ ಹಾನಿ ಮಾಡಿದವರಿಂದಲೇ ನಷ್ಟವನ್ನು ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೊರಾದಾಬಾದ್​ವೊಂದರಲ್ಲೇ 19 ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಸೋಂಕಿತರಿದ್ದ ಪ್ರದೇಶಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.(ಏಜೆನ್ಸೀಸ್​)
ಮಹಾಮಾರಿ ಕರೊನಾದಿಂದ ಕುಗ್ಗಿರುವ ಆರ್ಥಿಕತೆ ಮೇಲೆತ್ತಲು ಡೊನಾಲ್ಡ್​ ಟ್ರಂಪ್​ಗೆ ಸಲಹೆ ನೀಡಲಿದ್ದಾರೆ ಭಾರತೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
