ನಾಗರಕರ್ನೂಲ್:ಆಪರೇಷನ್ ಮಾಡಿದ ವೈದ್ಯರು ಹೊಟ್ಟೆಯಲ್ಲಿ ಹತ್ತಿಯನ್ನು ಹೊರತೆಗೆಯದೇ ಅಲ್ಲಿಯೇ ಬಿಟ್ಟಿದ್ದರಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆರೋಪಿಸಿರುವ ಘಟನೆ ತೆಲಂಗಾಣದ ನಾಗರಕರ್ನೂಲ್​ ಬಳಿ ನಡೆದಿದೆ.
ಇದನ್ನೂ ಓದಿ:ಹುಡುಗಿ ಜತೆಗೆ ಪ್ರೀತಿ, ಪ್ರಣಯ: ಕೋಪಗೊಂಡ ಮನೆಯವರು ಯುವಕನಿಗೆ ಮಾಡಿದ್ದಿಷ್ಟು..
ಜಿಲ್ಲೆಯ ಅಚ್ಚಂಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಮಾನುಷ ಕೃತ್ಯ ನಡೆದಿದೆ ಎನ್ನಲಾಗಿದ್ದು, ಸಂಬಂಧಿಕರು ಹೇಳುವ ದರ್ಶನಗಡ ತಾಂಡಾದ ಆದಿವಾಸಿ ಮಹಿಳೆ ರೋಜಾ ತುಂಬು ಗರ್ಭಿಣಿಯಾಗಿದ್ದಳು. ಈ ತಿಂಗಳ 15 ರಂದು ಆಕೆಗೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ಕುಟುಂಬಸ್ಥರು ಅಚ್ಚಂಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ವೈದ್ಯರು ಹೆರಿಗೆ ಮಾಡಿದಾಗ ಆಕೆ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಹೆರಿಗೆಯ ದಿನವೇ ವೈದ್ಯರು ಆಕೆಗೆ ಕುಟುಂಬ ಯೋಜನಾ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದು, ಆಪರೇಷನ್ ವೇಳೆ ವೈದ್ಯರು ಹತ್ತಿಯನ್ನು ಮರೆತು ಹೊಟ್ಟೆಗೆ ಹೊಲಿಗೆ ಹಾಕಿದ್ದಾರೆ. ಕೆಲವು ದಿನಗಳ ನಂತರ ಆಕೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಆದರೆ ಆಸ್ಪತ್ರೆಯಿಂದ ಮನೆಗೆ ಬಂದ ರೋಜಾ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ಹಣ, ಮತ್ತಿತರ ವಸ್ತುಗಳನ್ನು ಬಿಟ್ಟು ಅಂಗಡಿಯಲ್ಲಿ ದುಬಾರಿ ಚಾಕಲೆಟ್​ ಕದಿಯುವ ಹುಡುಗಿಯರ ಗ್ಯಾಂಗ್​..
ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಮಹಿಳೆಗೆ ತೀವ್ರ ರಕ್ತಸ್ರಾವ ಪ್ರಾರಂಭವಾಯಿತು. ಆತಂಕಗೊಂಡ ಕುಟುಂಬಸ್ಥರು ಆಕೆಯನ್ನು ಮಂಗಳವಾರ ಅಚ್ಚಂಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸೂಚಿಸಿದ್ದು,  ಕೂಡಲೇ ಆಕೆಯನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಪರೀಕ್ಷೆ ನಡೆಸಿದಾಗ ಆಕೆಯ ಹೊಟ್ಟೆಯಲ್ಲಿ ಹತ್ತಿಯಿರುವುದು ಕಂಡು ಬಂದಿದೆ.
ಕೊನೆಗೆ ಮಹಿಳೆಯ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದು, ನವಜಾತ ಶಿಶು ತಾಯಿಯಿಲ್ಲದೆ ಪರದಾಡುವಂತಾಗಿದೆ. ಬಳಿಕ ಆಕೆಯ ಮೃತದೇಹವನ್ನು ಇಂದು ಅಚ್ಚಂಪೇಟೆಗೆ ಕೊಂಡೊಯ್ದು ಸಂಬಂಧಿಕರು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ನಿರ್ಲಕ್ಷ್ಯದ ಚಿಕಿತ್ಸೆಯಿಂದ ರೋಜಾ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
