ರಾಂಚಿ:ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥನೊಬ್ಬ ಆರು ಸೆಂ.ಮೀ. ಉದ್ದದ ಬೀಗವನ್ನು ನುಂಗಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ. ಅದೃಷ್ಟವಶಾತ್​ ವೈದ್ಯರ ಪ್ರಯತ್ನದಿಂದಾಗಿ ಆತ ಬದುಕುಳಿದಿದ್ದಾನೆ.
ಜಿತೇಂದ್ರ ಕುಮಾರ್​ (22) ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ಆತನ ಮನೆಯವರು ಆತನಿಂದ ಯಾವುದೇ ತೊಂದರೆಯಾಗದಿರಲಿ ಎನ್ನುವ ಕಾರಣದಿಂದಾಗಿ ಗೃಹ ಬಂಧನದಲ್ಲಿರಿಸಿಕೊಂಡಿದ್ದರು. ಇತ್ತೀಚೆಗೆ ಒಂದು ದಿನ ಮಧ್ಯ ರಾತ್ರಿಯ ಸಮಯದಲ್ಲಿ ಕೈಗೆ ಸಿಕ್ಕ ಬೀಗವನ್ನು ಜಿತೇಂದ್ರ ನುಂಗಿದ್ದಾನೆ. ಆರು ಸೆಂ.ಮೀ. ಉದ್ದವಿದ್ದ ಬೀಗ ಗಂಟಲಿನಲ್ಲಿ ಸಿಕ್ಕಿಕೊಂಡಿದ್ದು ಆತನಿಗೆ ಉಸಿರಾಟದ ತೊಂದರೆಯುಂಟಾಗಿದೆ.
ತಕ್ಷಣವೇ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಂಡೋಸ್ಕೊಪಿ ವಿಧಾನದಿಂದ ಬೀಗವನ್ನು ಹೊರಗೆ ತೆಗೆಯುವ ಪ್ರಯತ್ನ ಮಾಡಲಾಗಿದೆ. ಆದರೆ ಅದು ಸಾಧ್ಯವಾಗದಿದ್ದಾಗ ಸತತ ನಾಲ್ಕು ಗಂಟೆಗಳ ಕಾಲ ಆಪರೇಷನ್​ ಮಾಡಿ ಬೀಗವನ್ನು ಹೊರತೆಗೆಯಲಾಗಿದೆ.
ಸದ್ಯ ಜಿತೇಂದ್ರ ಕುಮಾರ್ ಆರೋಗ್ಯ ಚೇತರಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
