ತಿರುವನಂತಪುರಂ:ರೋಗಿಯೊಬ್ಬರಿಗೆ ಬೆರಳಿನ ಬದಲು ನಾಲಿಗೆಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ವೈದ್ಯರು ಎಡವಟ್ಟು ಮಾಡಿ ಪೇಚಿಗೆ ಸಿಲುಕಿರುವ ಘಟನೆ ಕೋಝಿಕ್ಕೋಡ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯರ ಈ ನಿರ್ಲಕ್ಷ್ಯಕ್ಕೆ ಹಲವರು ಕಿಡಿಕಾರಿದ್ದು, ಮಗುವಿನ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ವಿಚಾರಣೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಸಚಿವರು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಗುವಿನ ಪೋಷಕರು, ನಮ್ಮ ಮಗಳ ಕೈಯಲ್ಲಿ ಆರು ಬೆರಳುಗಳಿದ್ದ ಕಾರಣ ಅದನ್ನು ತೆಗೆಸಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಂತೆ ಮಗುವಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಶಸ್ತ್ರಚಿಕಿತ್ಸೆಯ ಕೆಲ ಹೊತ್ತಿನ ಬಳಿಕ ಮಗಳನ್ನು ಮಾತನಾಡಿಸಲು ಹೋದಾಗ ಆಕೆಯ ಬಾಯಿಗೆ ಹತ್ತಿ ಇಟ್ಟು ಪ್ಲ್ಯಾಸ್ಟರ್​ ಸುತ್ತಿ ಕಳಿಸಲಾಗಿತ್ತು.
ಇದನ್ನೂ ಓದಿ:ಪಂದ್ಯದ ವೇಳೆ ಹಳಸಿದ ಆಹಾರ ನೀಡಿದ ಆರೋಪ; ಕೆಎಸ್​ಸಿಎ ವಿರುದ್ಧ FIR ದಾಖಲು
ಪರಿಶೀಲಿಸಿದಾಗ ಮಗುವಿನ ಕೈಯನ್ನು ಪರೀಕ್ಷಿಸಿದಾಗ ಆರನೇ ಬೆರಳು ಹಾಗೆಯೇ ಇತ್ತು. ಕೆಲ ಹೊತ್ತಿನ ಬಳಿಕ ಬೆರಳಿನ ಆಪರೇಷನ್​​ ಬದಲಾಗಿ ತಪ್ಪಾಗಿ ವೈದ್ಯರು ನಾಲಿಗೆ ಆಪರೇಷನ್​ ಮಾಡಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಸರ್ಕಾರದ ಆರೋಗ್ಯ ಸಚಿವೆ ವೀಣಾ, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾರಿಗೂ ಈ ರೀತಿಯಾಗದಂತೆ ಕ್ರಮ ವಹಿಸಲಾಗುವುದು. ಮಗುವಿನ ನಾಲಿಗೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
