ನವದೆಹಲಿ:ಯಾವುದಾದರೂ ಒಂದು ಕಟ್ಟಡಕ್ಕೆ ಬೆಂಕಿ ಬಿದ್ದರೆ ಅದರಲ್ಲಿರುವ ಬಹುತೇಕ ಎಲ್ಲರೂ ಮೊದಲು ಮಾಡುವ ಕೆಲಸ ಆ ಕಟ್ಟಡದಿಂದ ಹೊರಗೆ ಓಡಿಬರುವುದು. ಆದರೆ ಇಲ್ಲೊಂದು ಕಡೆ ಆಸ್ಪತ್ರೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ವೈದ್ಯರ ತಂಡವೊಂದು ತೆರೆದ ಹೃದಯದ ಚಿಕಿತ್ಸೆ ಮಾಡಿ ಮುಗಿಸಿದೆ.
ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ನೂರಕ್ಕೂ ಅಧಿಕ ಮಂದಿಯನ್ನು ತೆರವುಗೊಳಿಸಲಾಗಿತ್ತು. ಆದರೆ ಆ ಆಸ್ಪತ್ರೆಯ ಎಂಟು ವೈದ್ಯರ ತಂಡವೊಂದು ಅದ್ಯಾವುದನ್ನೂ ಲೆಕ್ಕಿಸದೆ ಓಪನ್ ಹಾರ್ಟ್ ಸರ್ಜರಿಯನ್ನು ನಡೆಸಿದೆ.
ಅಂದಹಾಗೆ ಇಂಥದ್ದೊಂದು ಅಪರೂಪದ ಘಟನೆ ನಡೆದಿದ್ದು ರಷ್ಯಾದ ಬ್ಲಾಗೊವೆಸ್ಚೆನ್ಸ್ಕ್​ ಎಂಬಲ್ಲಿನ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ. ಈ ಆಸ್ಪತ್ರೆಯ ತಾರಸಿ ಹಾಗೂ ಮೇಲಿನ ಮಹಡಿಗಳಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದರೂ ತಳಮಹಡಿಯ ಆಪರೇಷನ್ ಥಿಯೇಟರ್​ನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆಸ್ಪತ್ರೆಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ವೈದ್ಯತಂಡದ ಈ ಸಾಹಸಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. (ಏಜೆನ್ಸೀಸ್)
ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

ಸಾರಿಗೆ ಬಸ್ ಅಪಘಾತ: 25 ವಿದ್ಯಾರ್ಥಿಗಳು ಸೇರಿ 37 ಮಂದಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 7 =
Remember me
