ಉತ್ತರಪ್ರದೇಶ:ವ್ಯಕ್ತಿಯೊಬ್ಬ ನಾಯಿಯೊಂದಕ್ಕೆ ಅಮಾನುಷವಾಗಿ ಹಲ್ಲೆ ಮಾಡಿ ವರ್ತಿಸಿದ್ದಾನೆ. ನಾಯಿಯ ಕಾಲುಗಳನ್ನು ಹಿಡಿದು ರಸ್ತೆಗೆ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಆ ವ್ಯಕ್ತಿಯ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ರಾಜ್ಯದ ಬರೌತ್ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಪ್ರಕಾರ , ವ್ಯಕ್ತಿಯೊಬ್ಬ ಬೀದಿ ನಾಯಿಯ ಕಾಲನ್ನು ಹಿಡಿದು ರಸ್ತೆ ಮೇಲೆ ಹೊಡೆಯುತ್ತಿರುವುದು ಕಂಡುಬಂದಿದೆ.
ನಾಯಿಯ ಎರಡು ಹಿಂಗಾಲುಗಳನ್ನು ಹಿಡಿದು ತಿರುಗಿಸಿ ಹೊಡೆದನು. ನಾಯಿಗಳ ಜತೆ ಕ್ರೂರವಾಗಿ ವರ್ತಿಸುತ್ತಿದ್ದರಿಂದ ಸುತ್ತಮುತ್ತ ನಾಲ್ಕೈದು ನಾಯಿಗಳು ಬೊಗಳಿ ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ‘ನಾಯಿ ಬಿಡು… ಸಾಯುತ್ತೆದೆ’ ಎಂದು ಸುತ್ತಮುತ್ತಲಿನವರು ಕೂಗಿಕೊಂಡರೂ ಕೇಳಲಿಲ್ಲ.
Wtf! that's horrible Inhuman Behaviour 💔pic.twitter.com/Eelloxiky8
— Ghar Ke Kalesh (@gharkekalesh)June 15, 2024

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುತ್ತಲಿನ ಜನ ನಾಯಿಗೆ ಕ್ರೌರ್ಯ ಎಸಗುತ್ತಿದ್ದರೂ ತಡೆಯಲು ಮುಂದಾಗಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ನೆಟ್ಟಿಗರು ನಾಯಿಯ ಜತೆ ಕ್ರೂರವಾಗಿ ವರ್ತಿಸಿದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಆದರೆ, ಈ ಘಟನೆ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಯಿಯನ್ನು ಕ್ರೂರವಾಗಿ ನಡೆಸಿಕೊಂಡ ವ್ಯಕ್ತಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
