ಚೆನ್ನೈ:ತನ್ನ ಮಾಲೀಕರ ಮೇಲೆ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಹೋರಾಡಿ ಶ್ವಾನ ಒಂದು ಪ್ರಾಣ ಬಿಟ್ಟಿರುವ ಘಟನೆ ತಮಿಳುನಾಡಿನ ಮಿಂಜೂರಿನಲ್ಲಿ ನಡೆದಿದೆ.
ಮಾಲೀಕ ಭುವನೇಶ್ವರ್​ ರಕ್ಷಣೆಗೆ ನಿಂತ ಶ್ವಾನದ ಕತ್ತು ಸೀಳಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣ ಸಂಬಂಧ ಶಂಕರ್​(23), ಪ್ರಭಾಕರನ್​(22), ರೋಹಿತ್​(22) ಎಂಬುವವರನ್ನು ಬಂಧಿಸಲಾಗಿದ್ದು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಭುವನೇಶ್ವರ್​ ಅವರ ಸ್ನೇಹಿತ ಕಿರಣ್​ ಎಂಬುವವರ ಮೇಲೆ ಬಂಧಿತ ಆರೋಪಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ದೂರುದಾರ ಮಧ್ಯಪ್ರವೇಶಿಸಿ ಜಗಳವನ್ನು ಬಿಡಿಸಿ ಕಳುಹಿಸಿದ್ದರು.
ಇದಕ್ಕೆ ಕುಪಿತಗೊಂಡಿದ್ದ ಆರೋಪಿಗಳು ಭುವನೇಶ್ವರ್​ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಸ್ಥಳೀಯರು ಗಾಯಾಳುವನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಭುವನೇಶ್ವರ್​ ಆರೋಪಿಗಳ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ:VIDEO| ಉಪ್ಪು ಕದಿಯಲು 10 ಲಕ್ಷ ರೂ. ಮೌಲ್ಯದ ಕಾರಿನಲ್ಲಿ ಬಂದ ಖದೀಮರು
ತಮ್ಮ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿರುವುದನ್ನು ತಿಳಿದ ಆರೋಪಿಗಳು ಕುಪಿತಗೊಂಡು ದೂರುದಾರ ಭುವನೇಶ್ವರ್​ ಅವರ ಮನೆ ಬಳಿ ಬಂದು ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಸಾಕು ನಾಯಿಯೂ ಆರೋಪಿಗಳ ಮೇಲೆ ದಾಳಿ ಮಾಡಿದ್ದು ತನ್ನ ಮಾಲೀಕನ ರಕ್ಷಣೆಗೆ ಧಾವಿಸಿದೆ.
ಇದರಿಂದ ತೀವ್ರ ಕುಪಿತಗೊಂಡ ಮೂವರು ಆರೋಪಿಗಳು ಭುವನೇಶ್ವರ್​​ ಅವರ ಸಾಕು ನಾಯಿಯ ಮೇಲೆ ದಾಳಿ ಮಾಡಿ ಅದರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಪುನಃ ದೂರುದಾರರ ಮೇಲೆ ಹಲ್ಲೆಗೆ ಯತ್ನಿಸುತ್ತಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೂವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 20 =
Remember me
