ಕೇರಳ:ಪಾಲಕ್ಕಾಡ್ ಜಿಲ್ಲೆಯ ಮಂಕಾರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ನಾಯಿ ಕಚ್ಚಿದ್ದು, ಅಗತ್ಯ ಲಸಿಕೆ ತೆಗೆದುಕೊಂಡರೂ ರೇಬೀಸ್ ಸೋಂಕಿಗೆ ಬಲಿಯಾಗಿದ್ದಾರೆ.
ಮೇ 30 ರಂದು ಶ್ರೀಲಕ್ಷ್ಮಿಗೆ (19) ಬೀದಿ ನಾಯಿ ಕಚ್ಚಿದೆ. ಇದಾದ ನಂತರ ವೈದ್ಯರು ಸೂಚಿಸಿದ ಎಲ್ಲಾ ಅಗತ್ಯ ಲಸಿಕೆಗಳನ್ನು ವಿದ್ಯಾರ್ಥಿನಿ ತೆಗೆದುಕೊಂಡಿದ್ದರಂತೆ. ಆರಂಭಿಕ ದಿನಗಳಲ್ಲಿ ಯುವತಿಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿರಲಿಲ್ಲ. ಕೆಲವು ದಿನಗಳ ಹಿಂದೆ ರೇಬೀಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿತ್ತು. ಆದರೆ, ಇಂದು ಮುಂಜಾನೆ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಸೂಚಿಸಿದ್ದಾರೆ.
ನಾಯಿ ಕಡಿದು 7 ವರ್ಷದ ಬಾಲಕ ಸಾವು:ಇದೇ ರೀತಿಯ ಪ್ರಕರಣವೊಂದು ಕಳೆದ ವರ್ಷ ಕೇರಳದ ಕಾಸರಗೂಡಿನಲ್ಲಿ ನಡೆದಿದ್ದು, 7 ವರ್ಷದ ಬಾಲಕನಿಗೆ ನಾಯಿ ಕಡಿದಿದೆ. ತಕ್ಷಣ ಸರಿಯಾದ ಲಸಿಕೆ ಪಡೆದರೂ ಮೂರು ವಾರಗಳ ನಂತರ ಬಾಲಕ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − eleven =
Remember me
