ನವದೆಹಲಿ:ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ಗೆ ಈಗ ಅದೇ ಧ್ಯಾನ. ದೇಶಕ್ಕೆ ಭೇಟಿ ನೀಡುವ ಮುನ್ನ ಈ ಸಂಬಂಧ ಟ್ವೀಟ್​ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್​ಗೆ ಭೇಟಿ ನೀಡಲಿದ್ದಾರೆ ಟ್ರಂಪ್​. ಈಗ ಟ್ರಂಪ್​ ಮಾಡಿರುವ ಟ್ವೀಟ್​ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿರುವುದು ವಿಶೇಷ.
ಫೇಸ್‌ಬುಕ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಜುಕರ್‌ಬರ್ಗ್ ಹೇಳಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್​ ನಂಬರ್​ ಒನ್​ ಅಂತೆ. ಇನ್ನು ಎರಡನೇ ಸ್ಥಾನದಲ್ಲಿದ್ದಾರಂತೆ ಪ್ರಧಾನಿ ನರೇಂದ್ರ ಮೋದಿ. ಇದು ಅವರ ಫಾಲೋವರ್ಸ್​ ಎಷ್ಟಿದ್ದಾರೆ ಎಂಬ ಲೆಕ್ಕಾಚಾರದ ಮೇಲೆ ಹೇಳಲಾಗಿದೆ.
ಆದರೆ ಈ ಲೆಕ್ಕಾಚಾರ ಅಪದ್ಧ ಎನ್ನುತ್ತದೆ ಇಲ್ಲೊಂದು ವರದಿ. ಟ್ವಿಪ್ಲೊಮಸಿಯ 2019ರ ರ‍್ಯಾಂಕಿಂಗ್​ ಪ್ರಕಾರ ವಿಶ್ವದ ನಾಯಕರಲ್ಲಿ ನರೇಂದ್ರ ಮೋದಿ ಅವರೇ ಪ್ರಥಮ ಸ್ಥಾನದಲ್ಲಿದ್ದಾರೆ. ಮೋದಿ ಅವರಿಗೆ ವಿಶ್ವದಾದ್ಯಂತ 44 ಮಿಲಿಯ​ನ್​ ಫಾಲೋವರ್ಸ್​ ಇದ್ದಾರೆ. ಅದೇ ರೀತಿ ಅವರು ಎರಡನೇ ಸ್ಥಾನದಲ್ಲಿದ್ದಾರೆ (26 ಮಿಲಿಯನ್​ ಫಾಲೋವರ್ಸ್​).
ಆದರೆ ಈ ಸಾಲಿನಲ್ಲಿ ಬರಾಕ್​ ಒಬಾಮಾ ಅವರನ್ನು ಸೇರಿಸಲಾಗಿಲ್ಲ. ಏಕೆಂದರೆ ಅವರೀಗ ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಅವರಿಗೆ ಫೇಸ್​ಬುಕ್​ನಲ್ಲಿ 55 ಮಿಲಿಯನ್​ ಫಾಲೋವರ್ಸ್​ ಇದ್ದಾರೆ.
ಅಮೆರಿಕ ಅಧ್ಯಕ್ಷ ಟ್ರಂಪ್​ ಅವರು ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಎರಡು ದಿನದ ಕಾರ್ಯಕ್ರಮದಲ್ಲಿ ಅವರು, ಅಹಮದಾಬಾದ್​ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ. ಅಂದಹಾಗೆ ಟ್ರಂಪ್​ ಅಮೆರಿಕ ಅಧ್ಯಕ್ಷರಾದ ಮೇಲೆ ಭಾರತಕ್ಕೆ ಇದು ಅವರ ಮೊದಲ ಪ್ರವಾಸ.(ಏಜೆನ್ಸೀಸ್​)
https://twitter.com/realDonaldTrump/status/1228463577335554049?s=20
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
