ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ. 24ರಿಂದ 26ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಟ್ರಂಪ್ ಆಡಳಿತ ಮತ್ತು ಭಾರತ ಸರ್ಕಾರ ಅಧಿಕೃತವಾಗಿ ಯಾವುದೇ ಘೋಷಣೆ ಹೊರಡಿಸಿಲ್ಲ. ಟ್ರಂಪ್ ಭೇಟಿ ವೇಳೆ ಭಾರಿ ಮೊತ್ತದ ಹೂಡಿಕೆ, ವ್ಯಾಪಾರ ಒಪ್ಪಂದ ಏರ್ಪಡಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮೆರಿಕದ ಹ್ಯೂಸ್ಟನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಗಾಗಿ ಆಯೋಜಿಸಲಾಗಿದ್ದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಟ್ರಂಪ್​ಗೂ ಕೂಡ ಭಾರತದಲ್ಲಿ ‘ಕೆಮ್ ಚೋ ಟ್ರಂಪ್’ (ಹೇಗಿದ್ದೀರಿ ಟ್ರಂಪ್) ಎಂಬ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಟ್ರಂಪ್ ಭೇಟಿ ರಾಜಕೀಯವಾಗಿ ಮತ್ತು ವ್ಯಾಪಾರ ಸಂಬಂಧ ದೃಷ್ಟಿಯಲ್ಲಿ ಮಹತ್ವ ಪಡೆದುಕೊಂಡಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲ ತಿಂಗಳು ಬಾಕಿ ಇದ್ದು, ಟ್ರಂಪ್ ಭೇಟಿ ರಾಜಕೀಯ ಉದ್ದೇಶವನ್ನೂ ಹೊಂದಿದೆ ಎನ್ನಲಾಗುತ್ತಿದೆ. ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿರುವ ಟ್ರಂಪ್, ಭಾರತದ ಜತೆಗಿನ ಉತ್ತಮ ಸಂಬಂಧದ ಮೂಲಕ ಅಮೆರಿಕದ ಭಾರತೀಯ ಮತದಾರರ ಮನಸೆಳೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 2017ರಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ ವೇಳೆ ಟ್ರಂಪ್​ಗೆ ಭಾರತ ಭೇಟಿಗೆ ಆಹ್ವಾನ ನೀಡಲಾಗಿತ್ತು. ಆದರೆ ಹಲವು ಕಾರಣಗಳಿಂದ ಟ್ರಂಪ್ ದಿನಾಂಕ ಮುಂದೂಡುತ್ತಾ ಬಂದಿದ್ದರು.
ಡೊನಾಲ್ಡ್ ಟ್ರಂಪ್ ಭೇಟಿಗೂ ಮುನ್ನ ಅಮೆರಿಕದ ವ್ಯಾಪಾರ ಪ್ರತಿನಿಧಿ ರಾಬರ್ಟ್ ಲೈಟ್​ಹೈಜರ್ ಫೆಬ್ರವರಿ ಎರಡನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಈ ವೇಳೆ ಭಾರತ ಮತ್ತು ಅಮೆರಿಕ ನಡುವೆ ಸುಮಾರು 10 ಬಿಲಿಯನ್ ಡಾಲರ್ ( 71 ಸಾವಿರ ಕೋಟಿ ರೂ.) ಮೊತ್ತದ ವ್ಯಾಪಾರ ಒಪ್ಪಂದಗಳ ಕರಾರು ಅಂತಿಮಗೊಳಿ ಸಲಾಗುತ್ತದೆ ಎಂದು ತಿಳಿದುಬಂದಿದೆ. ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಷ್ ಗೋಯಲ್ ಮತ್ತು ರಾಬರ್ಟ್ ಲೈಟ್​ಹೈಜರ್ ವ್ಯಾಪಾರ ಒಪ್ಪಂದಗಳನ್ನು ಅಂತಿಮಗೊಳಿಸಿದ ಬಳಿಕ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಜತೆಗೆ ಈ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
